ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ನಾಳೆಯಿಂದ ಮೇ 4ರವರೆಗೆ ಕಠಿಣ ನಿರ್ಬಂಧ: ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿ; ಏನಿರುತ್ತೆ? ಏನಿರಲ್ಲ?

ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ ಮೇ 4ರ ಮುಂಜಾನೆ 6 ಗಂಟೆಯವರೆಗೂ ರಾಜ್ಯದಲ್ಲಿ ಕಠಿಣ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಲಾಗಿದೆ. 

ಬೆಂಗಳೂರು: ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ ಮೇ 4ರ ಮುಂಜಾನೆ 6 ಗಂಟೆಯವರೆಗೂ ರಾಜ್ಯದಲ್ಲಿ ಕಠಿಣ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಲಾಗಿದೆ. 

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 

ಪ್ರತಿ ದಿನ ಕಠಿಣ ನೈಟ್ ಕರ್ಫ್ಯೂ ಇರಲಿದ್ದು ವೀಕೆಂಡ್ ನಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ ಇಡೀ ದಿನ ಕರ್ಫ್ಯೂ ಇರಲಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು. 

ಇನ್ನು ನೈಟ್ ಕರ್ಫ್ಯೂ ಪ್ರತಿ ದಿನ ರಾತ್ರಿ 9ರಿಂದ ಬೆಳಗ್ಗೆ 6 ಗಂಟೆಯವರೆಗೂ ಇರಲಿದೆ. ಈ ಸಮಯದಲ್ಲಿ ಅನಗತ್ಯವಾಗಿ ಯಾರೂ ಓಡಾಡುವಂತಿಲ್ಲ. ಓಡಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. 

ವೀಕೇಂಡ್ ಕರ್ಫ್ಯೂ ವೇಳೆ ಏನಿರುತ್ತೆ? ಏನಿರಲ್ಲ?
* ಶಾಲೆ, ಕಾಲೇಜುಗಳು ಸಂಪೂರ್ಣ ಬಂದ್, ಆನ್ ಲೈನ್ ಕ್ಲಾಸ್ ಗಳಿಗೆ ಅವಕಾಶ.
* ದಿನಸಿ ಅಂಗಡಿಗಳು, ಹಣ್ಣು ತರಕಾರಿ, ಹಾಲಿನ ಡೇರಿ, ಮೀನು, ಮಾಂಸದ ಅಂಗಡಿ ತೆರೆಯಲು ಅನುಮತಿ.
* ಶಾಪಿಂಗ್ ಮಾಲ್, ಸಿನಿಮಾ ಹಾಲ್ ಗಳು, ಜಿಮ್, ಯೋಗಾ ಸೆಂಟರ್, ಸ್ವಿಮ್ಮಿಂಗ್ ಪೂಲ್, ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಸ್ಪಾ ಬಂದ್. 
* ಬಾರ್ , ರೆಸ್ಟೋರೆಂಟ್ ನಲ್ಲಿ ಮದ್ಯಸೇವನೆಗೆ ಅವಕಾಶವಿಲ್ಲ. 
* ಸಾರ್ವಜನಿಕ, ರಾಜಕೀಯ ಸೇರಿ ಎಲ್ಲಾ ಕಾರ್ಯಕ್ರಮಗಳಿಗೆ ನಿರ್ಬಂಧ.
* ಸಲೂನ್, ಬ್ಯೂಟಿಪಾರ್ಲರ್ ಗಳಿಗೆ ಷರತ್ತುಬದ್ಧ ಅನುಮತಿ
* ಕಟ್ಟಡ ನಿರ್ಮಾಣ ಕಾಮಗಾರಿ, ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅನುಮತಿ.
* ಬ್ಯಾಂಕ್, ಇನ್ಶೂರೆನ್ಸ್ ಸಂಸ್ಥೆ, ಮಾಧ್ಯಮಕ್ಕೆ ಅನುಮತಿ. 
* ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್.
* ಸರ್ಕಾರಿ ಕಚೇರಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿ ಕೆಲಸಕ್ಕೆ ಅನುಮತಿ
* ಮೆಟ್ರೋ, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಅನುಮತಿ.
* ಇ-ಕಾಮರ್ಸ್ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ.
* ದೇವಸ್ಥಾನ, ಚರ್ಚ್, ಮಸೀದಿ ಸೇರಿ ಎಲ್ಲಾ ಧಾರ್ಮಿಕ ಸ್ಥಳಗಳು ಬಂದ್.
* ಅಂತರಾಜ್ಯ, ಜಿಲ್ಲೆಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ.
* ಮದುವೆಗಳಿಗೆ 50 ಜನ. ಅಂತ್ಯಕ್ರಿಯೆಗೆ ಕೇವಲ 20 ಜನರಿಗೆ ಅವಕಾಶ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT