ರಾಜ್ಯ

ರಾಜ್ಯದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 23,558 ಮಂದಿಗೆ ಪಾಸಿಟಿವ್, 116 ಬಲಿ!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಇಂದು ದಾಖಲೆಯ 23,558 ಮಂದಿಗೆ ಕೊರೋನಾ ವಕ್ಕರಿಸಿದ್ದು ಸೋಂಕಿತರ ಸಂಖ್ಯೆ 12,22,202ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13,646ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 13,640 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,83,675ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 70 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 6,312 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,32,233ಕ್ಕೆ ಏರಿಕೆಯಾಗಿದೆ. ಇನ್ನು 1,76,188 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 904 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT