ಸಾಂದರ್ಭಿಕ ಚಿತ್ರ 
ರಾಜ್ಯ

ಯಾದಗಿರಿ: ಶಹಾಪುರ ಬಳಿ ಭೀಕರ ಅಪಘಾತ, ಐವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವು

ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ನಡೆದಿದೆ.

ಯಾದಗಿರಿ: ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಅಯ್ಯಮ್ಮ (60), ಶರಣಮ್ಮ (40), ಕಾಸೀಂಬೀ (40), ಭೀಮಬಾಯಿ (40) ಮತ್ತು ದೇವಿಂದ್ರಮ್ಮ (70) ಎಂದು ಗುರುತಿಸಲಾಗಿದ್ದು, ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾಗಿದ್ದಾರೆ.

ಮುನಮುಟಗಿ ಗ್ರಾಮದಿಂದ ಟಂಟಂನಲ್ಲಿ 10 ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಳ್ಳೂರು ಬಳಿಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಕೇರಳಿಗರದ್ದು ಇದೆಂಥ ಮನಸ್ಥಿತಿ: ನಟಿ ಮಾಳವಿಕಾಗೆ ಗೋಮಾಂಸ ಇಷ್ಟನಾ? ತಿಂತೀರಾ ಅಂತ ಕೇಳಿದ ಪತ್ರಕರ್ತ; ನೆಟ್ಟಿಗರ ಆಕ್ರೋಶ, Video!

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

‘ಆಕೆಯ ಹಿಂದಿನ ಚಟುವಟಿಕೆಗಳು ಹೇಗಿದ್ದವು?’: ಕಂಗನಾಗೆ ಬಾಬಾ ರಾಮ್​ದೇವ್ ತೀವ್ರ ತರಾಟೆ; ಸಂಸದೆ ವಿರುದ್ಧ ಕ್ರಮ ಕೈಗೊಳ್ಳುವಂತೆ BJPಗೆ ಆಗ್ರಹ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ