ರಾಜ್ಯ

ವನ್ಯಪ್ರಾಣಿಗಳಿಂದ ಉಂಟಾಗುವ ಹಸು ಪ್ರಾಣಹಾನಿಗೆ ಪರಿಹಾರ 10 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಳ: ಸಚಿವ ಅರವಿಂದ ಲಿಂಬಾವಳಿ

Raghavendra Adiga

ಬೆಂಗಳೂರು: ಮಾನವ ವನ್ಯಜೀವಿ ಸಂಘರ್ಷದಿಂದ ಹಸು, ಎಮ್ಮೆ, ಕೋಣ ಮೃತಪಟ್ಟಲ್ಲಿ ಅವುಗಳ ಮಾಲೀಕರಿಗೆ ಈಗ ನೀಡಲಾಗುತ್ತಿರುವ ಪರಿಹಾರ ಹಣವನ್ನು 10 ಸಾವಿರ ದಿಂದ 75 ಸಾವಿರ ರೂಪಾಯಿ ಗಳಿಗೆ ಹೆಚ್ಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. 

ಈ ಸಂಬಂಧ ನಿನ್ನೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು,ವನ್ಯಜೀವಿಗಳಿಂದ ಸಾಕು ಪ್ರಾಣಿಗಳ ಹತ್ಯೆ ಆದಲ್ಲಿ ತಕ್ಷಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು 20 ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡಲಾಗಿದೆ. ಆನಂತರ  ಸ್ಥಳೀಯ ಪಶುವೈದ್ಯಾಧಿಕಾರಿಗಳು ಸತ್ತ ಸಾಕುಪ್ರಾಣಿಯ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ನೀಡಿದ ನಂತರ ಉಳಿದ ಮೊತ್ತ ಪಾವತಿಸಬಹುದಾಗಿದೆ ಎಂದು ತಿಳಿಸಿದ್ದಾರೆ. 

ಇದರ ಜೊತೆ ಕುರಿ, ಮೇಕೆ, ಆಡು ಮೃತ ಪಟ್ಟಲ್ಲಿ ಈಗ ನೀಡುತ್ತಿರುವ ರೂ.5000 ಪರಿಹಾರ ಧನವನ್ನು ರೂ.10 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಈ ಆದೇಶದ ಮೂಲಕ ಜನಪ್ರತಿನಿಧಿಗಳು, ರೈತರು ಮತ್ತು ಸಾರ್ವಜನಿಕರ ಬಹು ದಿನಗಳ ಬೇಡಿಕೆಯನ್ನು ಈಡೇರಿಸಿ ದಂತಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SCROLL FOR NEXT