ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 123 ಬಲಿ, ಬೆಂಗಳೂರಿನಲ್ಲಿ 15,244 ಸೇರಿ 25,795 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಗುರುವಾರ ಒಂದೇ ದಿನ ಬರೋಬ್ಬರಿ 123 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13885ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಗುರುವಾರ ಒಂದೇ ದಿನ ಬರೋಬ್ಬರಿ 123 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13885ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 25,795 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 15,244 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,98,919ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 68 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 5624 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,37,857ಕ್ಕೆ ಏರಿಕೆಯಾಗಿದೆ. ಇನ್ನು 1,96,236 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 243 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT