ರಾಜ್ಯ

30ಕ್ಕಿಂತ ಕಡಿಮೆ ಹಾಸಿಗೆ ಇರುವ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಇಲ್ಲ: ಸಚಿವ ಸುಧಾಕರ್

Manjula VN

ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಘಟಕ ಹೊಂದಿಲ್ಲದ 30 ಹಾಸಿಗೆ ಸಾಮರ್ಥ್ಯಕ್ಕಿಂತ ಕಡಿಮೆ ಇರುವ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳನ್ನು ದಾಖಲಿಸಬಾರದು. ಈ ಆಸ್ಪತ್ರೆಗಳಲ್ಲಿ ಕೋವಿಡೇತರ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೂಚಿಸಿದ್ದಾರೆ. 

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿಗೆ ಭೇಟಿ ನೀಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ರೋಗಿಗಳ ಚಿಕಿತ್ಸೆಗೆ ಸರ್ಕಾರ ಹೆಚ್ಚು ಹಣ ಕೊಡುತ್ತದೆ ಎಂದು ಆಮ್ಲಜನಕ ಘಟಕವಿಲ್ಲದ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಇದು ನಿಲ್ಲಬೇಕು ಎಂದು ಹೇಳಿದ್ದಾರೆ. 

ಇನ್ನು ಆಮ್ಲಜನಕ ಘಟಕ ಇಲ್ಲದ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿ ದಾಖಖಲಿಸಿಕೊಂಡು ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿದರೆ ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. 

ಇದೇ ವೇಳೆ ಆಮ್ಲಜನಕ ಕೊರತೆ ಕುರಿತಂತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆಮ್ಲಜನಕದ ಕೊರತೆಯಾಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಜೆಎಸ್'ಡಬ್ಲ್ಯೂ ಸಂಸ್ಥೆಯು ನಗರಕ್ಕಾಗಿ 40 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿದ್ದಾರೆ. 5 ಸಾವಿರ ಸಿಲಿಂಡರ್ ಹೆಚ್ಚುವರಿಯಾಗಿ ದೊರೆಯಲಿದೆ. ಹೀಗಾಗಿ ಪ್ರಸಕ್ತ ಮಾಸದಲ್ಲಿ ನಗರಕ್ಕೆ ಆಮ್ಲಜನಕ ಸಮಸ್ಯೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ. 

ಅಲ್ಲದೆ, ಮುಂದಿನ ತಿಂಗಳಿನ ಹೊತ್ತಿಗೆ ನಗರದಲ್ಲಿ 1500 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯ ಬೀಳಲಿದ್ದು, ಒದಗಿಸಿಕೊಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಈಗಾಗಲೇ ಪತ್ರ ಬರೆದಿದ್ದಾರೆ ಎಂದು ಹೇಳಿದ್ದಾರೆ. 

SCROLL FOR NEXT