ರಾಜ್ಯ

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೋನಾ ಸೋಂಕು

Raghavendra Adiga

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೋನಾ ಸೋಂಕು ದೃಢವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಜಮೀರ್ "ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಕೊವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿರುತ್ತದೆ. ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ನಲ್ಲಿದ್ದೇನೆ.
ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ." ಎಂದಿದ್ದಾರೆ/

ಸಧ್ಯ ಮನೆಯಲ್ಲೇ ಕ್ವಾರಂಟೈನ್ ಆಗಿರುವ ಜಮೀರ್ ಅವರಿಗೆ ಈ ಹಿಂದೆ ಸಹ ಕೋವಿಡ್ ಸೋಂಕು ತಗುಲಿತ್ತು. ಕಳೆದ ವರ್ಷ ಆಗಸ್ಟ್ ನಲ್ಲಿ ಜಮೀರ್ ಕೋರೋನಾ ಸೋಂಕಿಗೆ ಒಳಗಾಗಿದ್ದರು.

SCROLL FOR NEXT