ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: 2 ಪ್ರತ್ಯೇಕ ಪ್ರಕರಣದಲ್ಲಿ ರೌಡಿ ಶೀಟರ್ ಸೇರಿ ಇಬ್ಬರ ಬರ್ಬರ ಹತ್ಯೆ

ನಗರದಲ್ಲಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ರೌಡಿ ಶೀಟರ್ ಸೇರಿ ಇಬ್ಬರ ಬರ್ಬರ ಹತ್ಯೆ ನಡೆದಿದೆ. 

ಬೆಂಗಳೂರು: ನಗರದಲ್ಲಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ರೌಡಿ ಶೀಟರ್ ಸೇರಿ ಇಬ್ಬರ ಬರ್ಬರ ಹತ್ಯೆ ನಡೆದಿದೆ. 

ಅಶೋಕನಗರ ಮತ್ತು ವಿದ್ಯಾರಣ್ಯಪುರ ಪೊಲೀಸ್ ಠಾಣಾ ನಿಯಂತ್ರಣದಲ್ಲಿ ಮಂಗಳವಾರ ರಾತ್ರಿ ಎರಡು ಹತ್ಯೆಗಳು ನಡೆದಿವೆ. 

ಹಳೆಯ ದ್ವೇಷದ ಹಿನ್ನೆಲೆಯಲ್ಲಿ 12 ದಿನಗಳ ಹಿಂದಷ್ಟೇ ಜೈಲಿನಿಂದ ಹೊರಬಂದಿದ್ದ ರೌಡಿ ಶೀಟರ್ ರವಿವರ್ಮ ಅಲಿಯಾಸ್ ಅಪ್ಪು (23) ಎಂಬಾತನನ್ನು ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಹತ್ಯೆ ಮಾಡಲಾಗಿದೆ. 

ರೋಜ್ ಗಾರ್ಡನ್'ನ ಮುನೇಶ್ವರ ಸ್ವಾಮಿ ದೇವಾಲಯದ ಸಮೀಪ ರವಿ ಮೇಲೆ ಮಂಗಳವಾರ ರಾತ್ರಿ 10ರ ಸುಮಾರಿಗೆ ಏಳೆಂಟು ಜನರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. 

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮುನ್ನವೇ ರವಿ ಕೊನೆಯುಸಿರೆಳೆದಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಮತ್ತೊಂದು ಪ್ರಕರಣ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಪ್ರಕಾಶ್ (25) ಎಂಬುವವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. 

ಪ್ರಕಾಶ್ ಅವರು ತಿಂಡ್ಲುವಿನಲ್ಲಿ ಕಟ್ಟಣ ನಿರ್ಮಾಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕಾಶ್ ನೆಲೆಸಿದ್ದ ಶೆಡ್ ಬಳಿಯೇ ಹತ್ಯೆ ನಡೆದಿದೆ. ಅನಾಮಧೇಯ ವ್ಯಕ್ತಿಗಳು ಪ್ರಕಾಶ್ ಅವರಿಗೆ ಹಲವು ಬಾರಿ ಚಾಕುವಿನಿಂದ ಇರಿದು ಸ್ಥಳದಿಂದ ಕಾಲ್ಕಿತ್ತಿದ್ದಾರೆ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT