ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಮರಣ ಮೃದಂಗ: ಕೊರೋನಾಗೆ 190 ಮಂದಿ ಬಲಿ, ಬೆಂಗಳೂರು 16,662 ಸೇರಿ 26,962 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬೆಂಗಳೂರುನಲ್ಲಿ 124 ಮಂದಿ ಸೇರಿ ರಾಜ್ಯದಲ್ಲಿ ಬರೋಬ್ಬರಿ 190 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14 ಸಾವಿರ ಗಡಿ ದಾಟಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬೆಂಗಳೂರುನಲ್ಲಿ 124 ಮಂದಿ ಸೇರಿ ರಾಜ್ಯದಲ್ಲಿ ಬರೋಬ್ಬರಿ 190 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14 ಸಾವಿರ ಗಡಿ ದಾಟಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 26,962 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 16,662 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,15,581ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 124 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 8,697 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,46,554ಕ್ಕೆ ಏರಿಕೆಯಾಗಿದೆ. ಇನ್ನು 2,14,311 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 1128 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT