ರಾಜ್ಯ

ಬೆಂಗಳೂರು: ಕೊರೋನಾ ಸೋಂಕಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Manjula VN

ಬೆಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಕೆಲ ದಿನಗಳ ಹಿಂದಷ್ಟೇ ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. 

ಕಳೆದ ರಾತ್ರಿ ವ್ಯಕ್ತಿ ಇದ್ದಕ್ಕಿದ್ದಂತೆಯೇ ಆಸ್ಪತ್ರೆಯ ಫ್ಯಾನ್'ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆಂದು ವರದಿಗಳು ತಿಳಿಸಿವೆ. 

SCROLL FOR NEXT