ರಾಜ್ಯ

ಬೆಂಗಳೂರು: ರೆಮ್ಡಿಸಿವಿರ್ ಚುಚ್ಚುಮದ್ದು ಅಕ್ರಮ ಮಾರಾಟ, ಸಿಸಿಬಿಯಿಂದ 16 ಆರೋಪಿಗಳ ಬಂಧನ!

Srinivasamurthy VN

ಬೆಂಗಳೂರು: ಕೊರೋನಾ ವೈರಸ್ ಸೋಂಕಿತರ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ರೆಮ್ಡಿಸಿವಿರ್ ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರು ಸಿಸಿಬಿ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಹಲವೆಡೆ ಏಕಕಾಲದಲ್ಲಿ ದಿಢೀರ್ ದಾಳಿ ಮಾಡಿದ ಸಿಸಿಬಿ ಪೊಲೀಸರು, 16 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ 55 ಚುಚ್ಚುಮದ್ದು ಬಾಟಲಿಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ ಇಬ್ಬರು, ವೈದ್ಯಕೀಯ ಔಷಧಿಗಳ ವಿತರಕರಾಗಿದ್ದು, ಅವರೆಲ್ಲರ ವಿರುದ್ದ 6 ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ಅವರು, 'ಅಕ್ರಮವಾಗಿ ಚುಚ್ಚುಮದ್ದು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಗಳು, 10 ಸಾವಿರ ರೂದಿಂದ 11 ಸಾವಿರ ರೂಗೆ ಮಾರಾಟ ಮಾಡುತ್ತಿದ್ದರು. ಈ ಜಾಲದಲ್ಲಿ ಮತ್ತಷ್ಟು ಮಂದಿ ಇದ್ದು, ಅವರ ಪತ್ತೆಗೆ ತನಿಖೆ ಮುಂದುವರಿದಿದೆ  ಎಂದು ತಿಳಿಸಿದರು. 

SCROLL FOR NEXT