ರಾಜ್ಯ

ರಾಜ್ಯದಲ್ಲಿ ಕೊರೋನಾ ಬ್ಲಾಸ್ಟ್: ಇಂದು ಬೆಂಗಳೂರಿನಲ್ಲಿ 20,733 ಸೇರಿ 34,804 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಭಾನುವಾರ ಒಂದೇ ದಿನ ಬರೋಬ್ಬರಿ 143 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14426ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 34,804 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 13,39,201ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 20,733 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,53,656ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 77 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 6982 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,62,594ಕ್ಕೆ ಏರಿಕೆಯಾಗಿದೆ. ಇನ್ನು 2,62,162 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 1492 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT