ಕೋವಿಡ್ ಪಾಸಿಟಿವ್ ರೋಗಿಗಳಿಗೆ ಸಿಗದ ಬೆಡ್: ಬೆಂಗಳೂರಿನಿಂದ ಕೋಲಾರಕ್ಕೆ ಮರಳಿದ ರೋಗಿಗಳು
ಕೋಲಾರದಿಂದ ಬೆಡ್ ಗಾಗಿ ಆಗಮಿಸಿದ ಕೋವಿಡ್ ಪಾಸಿಟಿವ್ ರೋಗಿಗಳು ಹಾಸಿಗೆ ಸಿಗದ ಹಿನ್ನೆಲೆಯಲ್ಲಿ ವಾಪಸ್ ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿದ್ದಾರೆ.
ಕೋಲಾರ: ಕೋಲಾರದಿಂದ ಬೆಡ್ ಗಾಗಿ ಆಗಮಿಸಿದ ಕೋವಿಡ್ ಪಾಸಿಟಿವ್ ರೋಗಿಗಳು ಹಾಸಿಗೆ ಸಿಗದ ಹಿನ್ನೆಲೆಯಲ್ಲಿ ವಾಪಸ್ ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿದ್ದಾರೆ.
ಯಾವುದೇ ಶಿಫಾರಸ್ಸು ಮಾಡಿದರೂ ಬೆಡ್ ಸಿಗಲಿಲ್ಲ, ಕೋಲಾರದ ಎಸ್ ಎನ್ ಆರ್ ಆಸ್ಪತ್ರೆ, ಆರ್ ಎಲ್ ಜಾಲಪ್ಪ ಆಸ್ಪತ್ರೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ವಾರ್ಡ್ ಗಳು ಫುಲ್ ಆಗಿದ್ದು ಬೆಡ್ ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
ಬೆಡ್ ಸಿಗದ ಹಿನ್ನೆಲೆಯಲ್ಲಿ ಹಲವು ಕೋವಿಡ್ ರೋಗಿಗಳು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಕಳೆದ ಮೂರು ನಾಲ್ಕು ದಿನಗಳಿಂದ ಕೆಲವು ರೋಗಿಗಳು ಬೆಂಗಳೂರಿಗೆ ಆಗಮಿಸಿದ್ದರು, ಆದರೆ ಹಾಸಿಗೆ ಸಿಗದ ಕಾರಣ ವಾಪಾಸಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.