ಎಚ್. ಡಿ. ದೇವೇಗೌಡ 
ರಾಜ್ಯ

ಕೋವಿಡ್-19 ಹರಡುವಿಕೆ ತಡೆಗೆ ಚುನಾವಣಾ ವಿಜಯೋತ್ಸವ ಮೊಟಕುಗೊಳಿಸಿ: ಮೋದಿಗೆ ದೇವೇಗೌಡ ಪತ್ರ!

ಕೋವಿಡ್-19 ಸಾಂಕ್ರಾಮಿಕ ವಿರುದ್ಧದ ಹೋರಾಟದ ಕ್ರಮವಾಗಿ ಎಲ್ಲಾ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಆರು ತಿಂಗಳ ಕಾಲ ಮುಂದೂಡಿ, ಚುನಾವಣಾ ವಿಜಯೋತ್ಸವನ್ನು ಮೊಟಕುಗೊಳಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ವಿರುದ್ಧದ ಹೋರಾಟದ ಕ್ರಮವಾಗಿ ಎಲ್ಲಾ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಆರು ತಿಂಗಳ ಕಾಲ ಮುಂದೂಡಿ, ಚುನಾವಣಾ ವಿಜಯೋತ್ಸವನ್ನು ಮೊಟಕುಗೊಳಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಎಚ್ ಡಿ. ದೇವೇಗೌಡ,  ಮುಂದಿನ ಆರು ತಿಂಗಳ ಕಾಲ ಎಲ್ಲಾ ಬೃಹತ್ ಜನಸಂಖ್ಯೆ ಸೇರುವ ಕಾರ್ಯಕ್ರಮವನ್ನು ರದ್ದುಪಡಿಸುವುದು ಸೇರಿದಂತೆ ಕೋವಿಡ್-19 ನಿಯಂತ್ರಣಕ್ಕೆ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.

ಈ ತಿಂಗಳಿನಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ ರಾಜ್ಯಗಳಲ್ಲಿ ಚುನಾವಣಾ ವಿಜಯೋತ್ಸವವನ್ನು ಮೊಟಕುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಿ, ಎಲ್ಲಾ ಉಪ ಚುನಾವಣೆಗಳು ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಆರು ತಿಂಗಳುಗಳ ಕಾಲ ಮುಂದೂಡಬೇಕೆಂದು ಅವರು ಹೇಳಿದ್ದಾರೆ.

ಈ ಅವಧಿಯಲ್ಲಿ, ಚುನಾವಣಾ ಆಯೋಗವು ಸುರಕ್ಷಿತವಾಗಿ ಚುನಾವಣೆಗಳನ್ನು ನಡೆಸಲು ಹೊಸ ನಿಯಮಗಳನ್ನು ರೂಪಿಸಬಹುದು ಮತ್ತು ಏಕಕಾಲದಲ್ಲಿ, ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕಾಗಿದೆ ಎಂದು ದೇವೇಗೌಡ ತಿಳಿಸಿದ್ದಾರೆ.

ಸಾಂಕ್ರಾಮಿಕ ನಿಯಂತ್ರಣ ಹಾಗೂ ಲಸಿಕೆ ಕಾರ್ಯಕ್ರಮಗಳನ್ನು ಹೆಚ್ಚಿಸಿ, ಜನರ ಪ್ರಾಣವನ್ನು ಉಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುವ ಎಲ್ಲಾ ರಚನಾತ್ಮಕ ನಿರ್ಧಾರಗಳನ್ನು ಬೆಂಬಲಿಸುವುದಾಗಿ ಹೇಳಿದ ದೇವೇಗೌಡ, ಈ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ. ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಯನ್ನು ಜಿಲ್ಲಾ ಆಸ್ಪತ್ರೆಗಳಿಗೆ ನೀಡಬೇಕಾಗಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಾರ್ ರೂಮ್ ಆಗಬೇಕಾಗಿದೆ ಎಂದರು.

ಪ್ರಸ್ತುತ ದೊಡ್ಡ ನಗರಗಳತ್ತ ಮಾತ್ರ  ಗಮನ ಹರಿಸಲಾಗುತ್ತಿದೆ. ಆದರೆ, ನಗರಯೇತರ ಜಿಲ್ಲೆಗಳು ಮತ್ತು ತಾಲೂಕ್ ಕೇಂದ್ರಗಳಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ. ಹಳ್ಳಿ ಕ್ಲಸ್ಟರ್ ಗಳತ್ತ ತುರ್ತಾಗಿ ಗಮನಹರಿಸಬೇಕಾದ ಅಗತ್ಯವಿದೆ. ಈ ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳ ಪಾತ್ರ ಮಹತ್ವದ್ದಾಗಿದೆ. ಲಸಿಕೆ ಬಗ್ಗೆ ಇನ್ನೂ ಸ್ಪಷ್ಟ ಸಂದೇಶ ಇಲ್ಲದಂತಾಗಿದೆ. ಲಸಿಕೆಯಿಂದ ನಾವು ಮಾತ್ರವಲ್ಲದೇ, ನಮ್ಮವರನ್ನು ಕೂಡಾ ಕಾಪಾಡಬೇಕಾಗಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT