ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು 180 ಮಂದಿ ಬಲಿ, ಬೆಂಗಳೂರಿನಲ್ಲಿ 17,550 ಸೇರಿ 31,830 ಮಂದಿಗೆ ಸೋಂಕು

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಇಂದು 31,830 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 14,00,775ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಇಂದು 31,830 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 14,00,775ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ  ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಮಂಗಳವಾರ ಒಂದೇ ದಿನ ಬರೋಬ್ಬರಿ 180 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14,807ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 17,550 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,87,751ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 97 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 10,793 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,84,050ಕ್ಕೆ ಏರಿಕೆಯಾಗಿದೆ. ಇನ್ನು 3,01,899 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 2,063 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video