ರಾಜ್ಯ

ಗೋಕರ್ಣದಲ್ಲಿ ಸಿಲುಕಿದ ವಿದೇಶಿ ಪ್ರಜೆಗಳು: ಕೊರೋನಾ ಲಸಿಕೆ ನೀಡುವಂತೆ ಸರ್ಕಾರಕ್ಕೆ ಮೊರೆ!

Manjula VN

ಕಾರವಾರ: ಕೊರೋನಾ ಪರಿಸ್ಥಿತಿಯಿಂದಾಗಿ ಗೋಕರ್ಣದಲ್ಲಿ ಸಿಲುಕಿಕೊಂಡಿರುವ ವಿದೇಶಿ ಪ್ರಜೆಗಳು ತಮಗೂ ಕೊರೋನಾ ಲಸಿಕೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಇದಕ್ಕೆ ಸರ್ಕಾರ ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ. 

ಧಾರ್ಮಿಕ ಪ್ರದೇಶಗಳು, ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಸಲುವಾಗಿ ಕೆಲವು ದಿನಗಳ ಹಿಂದೆಷ್ಟೇ 130 ವಿದೇಶಿ ಪ್ರಜೆಗಳು ಗೋಕರ್ಣಕ್ಕೆ ಆಗಮಿಸಿದ್ದರು. ಆದರೆ, ಕೊರೋನಾ ಸೋಂಕು ತೀವ್ರಗೊಂಡ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಇಲ್ಲಿಯೇ ತಂಗಿದ್ದಾರೆ. ಇದರಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ ಪ್ರತೀನಿತ್ಯ ಭೇಟಿ ನೀಡುತ್ತಿರುವ ಈ ವಿದೇಶಿ ಪ್ರಜೆಗಳು ತಮಗೂ ಲಸಿಕೆ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆನ್ನಲಾಗಿದೆ. 

ಪ್ರವಾಸಿಗರಾಗಿ ಗೋಕರ್ಣಗೆ ಬಂದಿದ್ದರು. ಕೊರೋನಾ ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿಯೇ ಇಲ್ಲಿಯೇ ಉಳಿದುಕೊಂಡಿದ್ದಾರೆ. ಇದೀಗ ಜಿಲ್ಲಾ ಆಸ್ಪತ್ರೆಗಳಿಗೆ ಪ್ರತೀನಿತ್ಯ ಭೇಟಿ ನೀಡುತ್ತಿರುವ ಅವರು, ಪ್ರತೀಯೊಬ್ಬ ಅಧಿಕಾರಿಗಳ ಬಳಿಯೂ ತಮಗೂ ಲಸಿಕೆ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರ ಎಂದು ಸ್ಥಳೀಯ ನಿವಾಸಿ ಭರತ್ ಕುಮಾರ್ ಅವರು ಹೇಳಿದ್ದಾರೆ. 

ಸಾಕಷ್ಟು ಜನರು ಲಸಿಕೆಗೆ ಹಣ ನೀಡಲೂ ಸಿದ್ಧರಿದ್ದಾರೆ. ಖಾಸಗಿ ಆಸ್ಪತ್ರೆಗಲಿಗೂ ಭೇಟಿ ನೀಡಿದ್ದಾರೆ. ಆದರೆ, ಸರ್ಕಾರದ ಸೂಚನೆಗಳಿಲ್ಲದ ಕಾರಣ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ವಿದೇಶಿ ಪ್ರಜೆಗಳು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆಂದು ತಿಳಿಸಿದ್ದಾರೆ. 

ರಾಯಭಾರಿ ಕಚೇರಿಗಳು ಹಾಗೂ ಅಂತರಾಷ್ಟ್ರೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಲಸಿಕೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ಆದರೆ, ದೇಶದಲ್ಲಿ ಸಿಲುಕಿಕೊಂಡಿರುವ ವಿದೇಶಿ ಪ್ರಜೆಗಳಿಗೆ ಲಸಿಕೆ ನೀಡುವ ಕುರಿತು ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ಕಾರವಾರದ ಅಧಿಕಾರಿಗಳು ಹೇಳಿದ್ದಾರೆ. 

SCROLL FOR NEXT