ಬಿಎಂಟಿಸಿ 
ರಾಜ್ಯ

ಕಠಿಣ ಕೊರೋನಾ ಕರ್ಫ್ಯೂ: ಬಿಎಂಟಿಸಿಯಿಂದ ಅಗತ್ಯ ಸಾಮಾನ್ಯ ಸಾರಿಗೆ ಸೇವೆ

ಕೊರೋನಾ ವೈರಸ್ ಸೋಂಕಿನ ಎರಡನೇ ಅಲೆ ಹಾಗೂ ಕೋವಿಡ್  ಪ್ರಕರಣಗಳನ್ನು ತಗ್ಗಿಸಲು  ರಾಜ್ಯ ಸರ್ಕಾರ ಇಂದು  ರಾತ್ರಿ 9 ಗಂಟೆಯಿಂದ ಮೇ 12ರ ಬೆಳಗ್ಗೆ 6 ಗಂಟೆಯವರೆಗೆ  ಕಠಿಣ ಕರ್ಫ್ಯೂವನ್ನು ಜಾರಿಗೊಳಿಸಿ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ನಿಟ್ಟಿನಲ್ಲಿ  ಬಿಎಂಟಿಸಿ  ಸಾರಿಗೆ ಸೇವೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ

ಬೆಂಗಳೂರು: ಕೊರೋನಾ ವೈರಸ್ ಸೋಂಕಿನ ಎರಡನೇ ಅಲೆ ಹಾಗೂ ಕೋವಿಡ್  ಪ್ರಕರಣಗಳನ್ನು ತಗ್ಗಿಸಲು  ರಾಜ್ಯ ಸರ್ಕಾರ ಇಂದು  ರಾತ್ರಿ 9 ಗಂಟೆಯಿಂದ ಮೇ 12ರ ಬೆಳಗ್ಗೆ 6 ಗಂಟೆಯವರೆಗೆ  ಕಠಿಣ ಕರ್ಫ್ಯೂವನ್ನು ಜಾರಿಗೊಳಿಸಿ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ನಿಟ್ಟಿನಲ್ಲಿ  ಬಿಎಂಟಿಸಿ  ಸಾರಿಗೆ ಸೇವೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಆದಾಗ್ಯೂ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳು ಮತ್ತಿತರ ಅಗತ್ಯ ಸೇವೆಗಳಲ್ಲಿ  ಕರ್ತವ್ಯ ನಿರ್ವಹಿಸುವ ನೌಕರರ ಅನುಕೂಲಕ್ಕಾಗಿ  ಬಿಎಂಟಿಸಿಯಿಂದ 95 ಮಾರ್ಗಗಳಲ್ಲಿ 150 ಅಗತ್ಯ ಸಾಮಾನ್ಯ ಬಸ್ ಸೇವೆಯನ್ನು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಲ್ಪಿಸಲಾಗುತ್ತಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 06 ವಾಯು ವಜ್ರ ಬಸ್ ಗಳನ್ನು ವಿಮಾನಯಾನ ಪ್ರಯಾಣಿಕರ ಅನುಕೂಲಕ್ಕಾಗಿ ಒದಗಿಸಲಾಗುತ್ತಿದೆ. ಇವುಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿವೆ. ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಅನುಮತಿಸಿರುವ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದ ಸಾರ್ವಜನಿಕ ಪ್ರಯಾಣಿಕರು
ಪ್ರಯಾಣಿಸಲು ಅವಕಾಶವಿರುವುದಿಲ್ಲ. 

ಎಲ್ಲಾ ಬಸ್ಸುಗಳಲ್ಲಿ ಒಟ್ಟು ಆಸನಗಳ ಸಾಮರ್ಥ್ಯದ ಶೇ.50 ರಷ್ಟು ಪ್ರಯಾಣಿಕರು ಮಾತ್ರ ಪ್ರಯಾಣಿಸಲು ಅನುಮತಿಸಲಾಗಿದೆ. ಚಾಲನಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸತಕ್ಕದು ಎಂದು ಬಿಎಂಟಿಸಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!