ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಕರ್ಫ್ಯೂ: ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳ ಕೊರೋನಾ ಕರ್ಫ್ಯೂ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಲನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳ ಕೊರೋನಾ ಕರ್ಫ್ಯೂ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಲನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. 

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿದೆ. ಎಲ್ಲ ಪ್ರಾಯೋಗಿಕ ಪರೀಕ್ಷೆಗಳು ಸಹ ಮುಂದೂಡಲ್ಪಟ್ಟಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ಪರೀಕ್ಷೆಗಳು ಏಪ್ರಿಲ್ 19ರಿಂದ ಆರಂಭವಾಗಬೇಕಿತ್ತು. ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದರು.

ಕೊರೊನಾ 2ನೇ ಅಲೆ ಇಡೀ ದೇಶವನ್ನೆ ಕಾಡುತ್ತಿದೆ. ಕೊರೊನಾ ಹೊಡೆತಕ್ಕೆ ಕರ್ನಾಟಕ ಅಕ್ಷರಶಃ ತತ್ತರಿಸಿದೆ. ಮಾಹಾಮಾರಿ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನೂಜಾರಿಗೆ ತಂದಿದೆ. ಇಂದಿನಿಂದ ಮೇ 4ರವರೆಗೂ ನೈಟ್‌ ಕರ್ಫ್ಯೂ ಜೊತೆ ಜೊತೆಗೆ ವೀಕೆಂಡ್‌ ಕರ್ಫ್ಯೂವನ್ನ ಹೇರಿ ಆದೇಶ ಹೊರಡಿಸಿದೆ. ಹಾಗೂ ಶಾಲಾ-ಕಾಲೇಜು ಸೇರಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಬಂದ್ ಮಾಡುವಂತೆ ಮಾರ್ಗಸೂಚಿಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಹೀಗಾಗಿ ಬಹುತೇಕ ಕಾಲೇಜು ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಆದರೆ, ಈ ಸಂದರ್ಭದಲ್ಲಿ ಪರೀಕ್ಷೆ ನಡೆಸೋದು ಎಷ್ಟು ಸರಿ ಎನ್ನುವ ಪ್ರಶ್ನೆ ಮೂಡಿತ್ತು.

ಸರ್ಕಾರ 14 ದಿನಗಳ ಕೊರೋನಾ ಕರ್ಫ್ಯೂ ಜಾರಿ ಮಾಡಿದ ಬಳಿಕವಂತೂ ಸಾಕಷ್ಟು ಜನರು ಪರೀಕ್ಷೆ ವಿಚಾರವಾಗಿ ಸಾಕಷ್ಟು ಟೀಕೆಗಳು ಹಾಗೂ ಪ್ರಶ್ನೆಗಳನ್ನು ಎತ್ತಿದ್ದರು. 

ಸರ್ಕಾರ ಸಾರಿಗೆ ಸೇವೆಗಳನ್ನು ಬಂದ್ ಮಾಡಿದೆ. ನಾವು ಹೇಗೆ ಪರೀಕ್ಷೆ ಬರೆಯುವುದು ಎಂದು ಹಲವರು ಪ್ರಶ್ನೆ ಮಾಡಿದ್ದರು. ವಿವಿಯು ಕೂಡಲೇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಹಲವರು ಆಗ್ರಹಿಸಿದ್ದರು. 

ರಾಣಿ ಚೆನ್ನಮ್ಮ ವಿವಿಯ ಎಲ್ಲಾ ಪರೀಕ್ಷೆ ಮುಂದೂಡಿಕೆ
14 ದಿನಗಳ ಕೊರೋನಾ ಕರ್ಫ್ಯೂ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. 

ಇಂದಿನಿಂದ ಆರಂಭವಾಗಬೇಕಿದ್ದ ಪದವಿ, ಸ್ನಾತಕೋತ್ತರ, ಎಂಬಿಎ ಪರೀಕ್ಷೆಗಳನ್ನು ಮುಂದೂಡಿ ರಾಣಿ ಚೆನ್ನಮ್ಮ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್