ಗೌರವ್ ಗುಪ್ತಾ 
ರಾಜ್ಯ

ಕೊರೋನಾ ಪರಿಸ್ಥಿತಿ ನಿಭಾಯಿಸಲು ನಮಗೂ ಸಹಾಯ ಬೇಕಾಗಿದೆ: ಬಿಬಿಎಂಪಿ

ಬೆಂಗಳೂರಿನಲ್ಲಿ ವೈದ್ಯಕೀಯ ಮೂಲಸೌಕರ್ಯ ಉತ್ತಮವಾಗಿಯೇ ಇದ್ದರೂ, ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ಆತಂಕವನ್ನು ಸೃಷ್ಟಿಸಿದೆ. ಹೀಗಾಗಿ ಪರಿಸ್ಥಿತಿ ನಿಭಾಯಿಸಲು ನಮಗೆ ಸಹಾಯದ ಅಗತ್ಯವಿದೆ ಎಂದು ಬಿಬಿಎಂಪಿ ಹೇಳಿದೆ. 

ಬೆಂಗಳೂರು: ಬೆಂಗಳೂರಿನಲ್ಲಿ ವೈದ್ಯಕೀಯ ಮೂಲಸೌಕರ್ಯ ಉತ್ತಮವಾಗಿಯೇ ಇದ್ದರೂ, ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ಆತಂಕವನ್ನು ಸೃಷ್ಟಿಸಿದೆ. ಹೀಗಾಗಿ ಪರಿಸ್ಥಿತಿ ನಿಭಾಯಿಸಲು ನಮಗೆ ಸಹಾಯದ ಅಗತ್ಯವಿದೆ ಎಂದು ಬಿಬಿಎಂಪಿ ಹೇಳಿದೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ನಗರದಲ್ಲಿ ಕೊರೋನಾ ಪರಿಸ್ಥಿತಿ ನಿಭಾಯಿಸಲು ನಮಗೆ ಸಹಾಯದ ಅಗತ್ಯವಿದ್ದು, ಈಗಾಗಲೇ ಎನ್'ಜಿಒಗಳು, ತಜ್ಞರು, ಸ್ವಯಂ ಸೇವಕರು ಹಾಗೂ ಸಾರ್ವಜನಿಕರು ಹಾಗೂ ಸರ್ಕಾರದ ಸಹಾಯವನ್ನು ಕೇಳಲಾಗುತ್ತಿದೆ ಎಂದು ಹೇಳಿದ್ದಾರೆ. 

ಪರಿಸ್ಥಿತಿ ನಿಭಾಯಿಸಲು ನಮಗೆ ಮತ್ತಷ್ಟು ವೈದ್ಯರು, ಶುಶ್ರೂಕರು ಹಾಗೂ ಕೋವಿಡ್ ಕೇರ್ ಕೇಂದ್ರಗಳ ನಿರ್ವಹಣೆಗೆ, ಕೌನ್ಸಿಂಗ್, ಹೋಂ ಐಸೋಲೇಷನ್, ಸಂಪರ್ಕಿತರ ಪತ್ತೆ ಮಾಡಲು, ಸ್ಯಾಂಪಲ್ ಸಂಗ್ರಹಿಸಲು ಹಾಗೂ ಇತರೆ ಸೇವೆಗಳಿಗೆ ಸ್ವಯಂ ಸೇವಕರು ಬೇಕಾಗಿದ್ದಾರೆ. ಈಗಾಗಲೇ ಕೆಲವರೊಂದಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಲು ಮಾತುಕತೆಗಳನ್ನು ನಡೆಸಲಾಗುತ್ತಿದೆ. ಕೆಲ ಎನ್'ಜಿಒಗಳು ಸಹಾಯ ಮಾಡಲು ಮುಂದೆ ಬಂದಿವೆ ಎಂದು ತಿಳಿಸಿದ್ದಾರೆ. 

40 ವೈದ್ಯರನ್ನೊಳಗೊಂಡ ಎನ್'ಜಿಒ ಸಂಸ್ಥೆಯೊಂದು ಸಹಾಯ ಮಾಡಲು ಮುಂದೆ ಬಂದಿದೆ. ಕೋವಿಡ್ ಕೇರ್ ಕೇಂದ್ರವಾಗಿಸಲು ಹೋಟೆಲ್ ಒಂದರ ಮಾಲೀಕರು ಮುಂದೆ ಬಂದಿದ್ದಾರೆ. ಇದೀಗ ಸಿಬ್ಬಂದಿಗಳನ್ನು ಯಾವ ರೀತಿ ನಿಯೋಜನೆಗೊಳಿಸಬಹುದು ಎಂಬುದರ ಕುರಿತು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ. 

ಕಳೆದವರ್ಷ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದ ಸ್ವಯಂ ಸೇವಕರು ಈ ಬಾರಿ ಕೂಡ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಸೋಂಕಿತರ ಸಂಪರ್ಕ ಪತ್ತೆ ಹಚ್ಚುವುದು, ಸೋಂಕಿತರ ಮಾಹಿತಿ ಕಲೆಹಾಕುವ ಹಾಗೂ ಇತರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಲು ಇಂತಹವರನ್ನು ನಿಯೋಜಿಸಲಾಗುತ್ತದೆ. ಕೆಲವು ಪ್ರದೇಶಗಳಲ್ಲಿ ಹೆಚ್ಚೆಚ್ಚು ಸ್ವಯಂಸೇವಕರಿದ್ದು, ಇನ್ನೂ ಕೆಲವು ಪ್ರದೇಶಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಈ ಸಮಸ್ಯೆಯನ್ನು ಸರಿದೂಗಿಸಲಾಗುತ್ತದೆ. ವಿಪ್ರೋ ಫೌಂಡೇಷನ್ ಕೂಡ ಬಿಬಿಎಂಬಿಗೆ ಸಹಾಯ ಮಾಡಲು ಮುಂದಾಗಿದೆ. ಸಾಕಷ್ಟು ಜನರು ಸಹಾಯ ಮಾಡುತ್ತಿದ್ದಾರೆ. ಆದರೂ ಮತ್ತಷ್ಟು ಸ್ವಯಂ ಸೇವಕರ ಅಗತ್ಯವಿದೆ. 

ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೈಕೆ ಕೇಂದ್ರ, ಆಸ್ಪತ್ರೆಗಳ ಸೇವೆ ಹೆಚ್ಚಳ ಮಾಡುವ ಸಂಬಂಧ ಪಾಲಿಕೆ ಸಕಲ ಸಿದ್ಧತೆ ಕೈಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ನೀಡಬೇಕು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ 11 ಸಾವಿರ ಬೆಡ್ ಗಳನ್ನು ಪಡೆಯಲಾಗುವುದು. ಈವರೆಗೂ 9 ಸಾವಿರ ಹಾಸಿಗೆ ಲಭ್ಯವಾಗಿದೆ. ಶೀಘ್ರದಲ್ಲಿಯೇ ಉಳಿದ ಹಾಸಿಗೆ ಪಡೆಯಲಾಗುವುದು. ಮುಂದಿನ ದಿನಗಳಲ್ಲಿ ಮತ್ತಷ್ಟು ಹಾಸಿಗೆ ಪಡೆಯಲು ಬಿಬಿಎಂಪಿ ಕ್ರಮ ವಹಿಸಲಿದೆ. ಈಗಿರುವ ಸನ್ನಿವೇಶದಲ್ಲಿ ದೇಶದಲ್ಲಿಯೇ ವೈದ್ಯಕೀಯ ಸೌಲಭ್ಯ ಬೆಂಗಳೂರಿನಲ್ಲಿಯೇ ಚೆನ್ನಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!