ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ 
ರಾಜ್ಯ

ರಾಜ್ಯದಲ್ಲಿ ಕೊರೋನಾ ರಣಕೇಕೆ: ಇಂದು ದಾಖಲೆಯ 229 ಮಂದಿ ಬಲಿ, ಬೆಂಗಳೂರಿನಲ್ಲಿ 22,596 ಸೇರಿ 39,047 ಮಂದಿಗೆ ಸೋಂಕು

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಇಂದು ದಾಖಲೆಯ 39,047 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 14,39,822ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಇಂದು ದಾಖಲೆಯ 39,047 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 14,39,822ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ  ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಒಂದೇ ದಿನ ಬರೋಬ್ಬರಿ 229 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 22,596 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 137 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 11,833 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,95,883ಕ್ಕೆ ಏರಿಕೆಯಾಗಿದೆ. ಇನ್ನು 3,28,884 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 2,192 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT