ರಾಜ್ಯ

ನಗರದಲ್ಲಿ ಐಸಿಯು ಹಾಸಿಗೆಗಳ ಸಮಸ್ಯೆ ಇನ್ನೂ ಇದೆ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

Manjula VN

ಬೆಂಗಳೂರು: ನಗರದಲ್ಲಿ ಐಸಿಯು ವೆಂಟಿಲೇಟರ್ ಹಾಸಿಗೆಗಳ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಐಸಿಯು ಬೆಡ್ ಗಳ ವ್ಯವಸ್ಥೆಗೆ ಸಿದ್ಧತೆ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿಗ ಅವರು, ನಗರದಲ್ಲಿ ಹಾಸಿಗೆಗಳ ಕೊರತೆಯಿಲ್ಲ. ಸರ್ಕಾರಿ ಆಸ್ಪತ್ರೆಗಳು ಶಿಫಾರಸು ಮಾಡಿದ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆ ಸುಧಾರಿಸಿದೆ. ಆದರೆ, ಐಸಿಯು ಹಾಸಿಗೆಗಳ ಸಮಸ್ಯೆ ಈಗಲೂ ಸವಾಲಾಗಿ ಪರಿಣಮಿಸಿದೆ. ಈ ಕುರಿತ ಸಮಸ್ಯೆ ಬಗೆಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. 

ಸರ್ಕಾರಿ ಆಸ್ಪತ್ರೆಗಲಲ್ಲಿ 10,000 ಹಾಸಿಗೆಗಳಿದೆ. ಆದರೆ, ಐಸಿಯು ಹಾಸಿಗೆಗಳಿಗೆ ಸಮಸ್ಯೆಗಳಿರುವುದು ಗಮನಕ್ಕೆ ಬಂದಿದೆ. ಐಸಿಯು ಬೆಡ್'ಗಳ ಹೊಸ ಆಸ್ಪತ್ರೆ ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆ ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ದಿನೇ ದಿನೇ ಕೋವಿಡ್ ಸಹಾಯವಾಣಿ 1912 ಸಂಖ್ಯೆಗೆ ಅಧಿಕ ಕರೆಗಳು ಬರುತ್ತಿವೆ. ಇತ್ತೀಚೆಗೆ ಒಟ್ಟು 400 ಲೈನ್ ಏಕಕಾಲದಲ್ಲಿ ಸಂಪರ್ಕಿಸುವ ತಂತ್ರಜ್ಞಾನವನ್ನೂ ಅಭಿವೃದ್ಧಿಪಡಿಸಲಾಗಿದೆ. ನಮ್ಮ ಸಹಾಯವಾಣಿಯ ಮೂಲಕ ಸಾಮಾನ್ಯ ಹಾಸಿಗೆಗಳು ಮತ್ತು ಆ್ಯಕ್ಸಿಜನ್ ಹಾಸಿಗೆಗಳನ್ನು ಪಡೆಯಬಹುದು. ಅದಕ್ಕೆ ಅನುಕೂಲವಾಗುವಂತೆ ಕಂಟ್ರೋಲ್ ರೂಮ್ ಗಲಿಂದ ಹಾಸಿಗೆಗಳನ್ನು ಒದಗಿಸಲು ವಿಕೇಂದ್ರೀಕೃತ ವ್ಯವಸ್ಥೆ ಮಾಡಿದ್ದು, ಪಾಲಿಕೆ ವ್ಯಾಪ್ತಿಯ ಎಂಡು ವಾರ್ ರೂಮ್ ಗಳಿಗೆ ಅಧಿಕಾರ ನೀಡಲಾಗಿದೆ ಎಂದಿದ್ದಾರೆ. 

SCROLL FOR NEXT