ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಕಾರು-ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದಾರುಣ ಸಾವು

ಲಾಕ್‌ಡೌನ್ ಕಾರಣ ಸ್ವಗ್ರಾಮಕ್ಕೆ ಬರುವಾಗ ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಬಳಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಸುಕಿನ 1.45ರ ಸುಮಾರಿಗೆ ನಡೆದಿದೆ.

ಕಲಬುರಗಿ: ಲಾಕ್‌ಡೌನ್ ಕಾರಣ ಸ್ವಗ್ರಾಮಕ್ಕೆ ಬರುವಾಗ ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಬಳಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಸುಕಿನ 1.45ರ ಸುಮಾರಿಗೆ ನಡೆದಿದೆ.

ಲಾಕ್‌ಡೌನ್ ಜಾರಿಯಿಂದಾಗಿ ಬೆಂಗಳೂರಿನಿಂದ ಕಾರಿನಲ್ಲಿ ಬರುವಾಗ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ (ತಂದೆ) ಬಸವರಾಜ ಭೀಮರಾವ ಬೆಳ್ಳೂರು(52), ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ (ಮಗ) ಭೀಮರಾವ ಬೆಳ್ಳೂರು (30),ಬಿಇ ಪದವಿಧರ ಸುನೀಲ ಶಿವರಾಜ ಪಾಟೀಲ‌(30), ಕಾರು ಚಾಲಕ ಕೊರಡಂಪಳ್ಳಿಯ ರೇವಣಸಿದ್ದ ಬಸವರಾಜ ಕೊರಡಂಪಳ್ಳಿ(30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರು ಚಿಂಚೋಳಿಯ ಕೊರಪಂಡಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!