ಕಾವೇರಿ ನದಿ 
ರಾಜ್ಯ

ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಕೋವಿಡ್‌ನಿಂದಾಗಿ ಸಾವುಗಳು ಹೆಚ್ಚಾಗುತ್ತಿದ್ದಂತೆ, ಶ್ರೀರಂಗಪಟ್ಟಣದ ಪ್ರಸಿದ್ಧ ಪಶ್ಚಿಮವಾಹಿನಿ ಮತ್ತಿತರೆಡೆಗಳಲ್ಲಿ ಮೃತರ ಚಿತಾಭಸ್ಮವನ್ನು ಬಿಡಲು ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವುದನ್ನು ಗಮನಿಸಿ ಈ ಆದೇಶ ನೀಡಲಾಗಿದೆ.

ಕೋವಿಡ್ 19 ರ ಹರಡುವಿಕೆಯ ಬಗ್ಗೆ ಸ್ಥಳೀಯರು ಭಯ ವ್ಯಕ್ತಪಡಿಸಿದ್ದರಿಂದ ರಾಜ್ಯ ಮತ್ತು ನೆರೆ ಜಿಲ್ಲೆ, ನೆರೆ ರಾಜ್ಯಗಳ ಜನ ಕಾವೇರಿಯಲ್ಲಿ ಚಿತಾಭಸ್ಮವನ್ನು ಬಿಡುವುದಕ್ಕೆ ತಾಲ್ಲೂಕು ಆಡಳಿತವು ನಿಷೇಧ ಹೇರಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎಂ ವಿ ರೂಪಾ ತಿಳಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು, 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT