ಸಾಂದರ್ಭಿಕ ಚಿತ್ರ 
ರಾಜ್ಯ

ಶೇ.50 ರಷ್ಟು ಕಾರ್ಮಿಕರನ್ನು ಬಳಸಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರ ಅನುಮತಿ

ರಾಜ್ಯದಲ್ಲಿ ಕೊರೋನಾ ಲಾಕ್‌ಡೌನ್ ಘೋಷಣೆ ಹಿನ್ನೆಲೆಯಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಹೇರಿದ್ದ ಸಂಪೂರ್ಣ ನಿರ್ಬಂಧವನ್ನು ರಾಜ್ಯ ಸರ್ಕಾರ ಬುಧವಾರ ಸಡಿಲಗೊಳಿಸಿದ್ದು, ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್‌ಡೌನ್ ಘೋಷಣೆ ಹಿನ್ನೆಲೆಯಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಹೇರಿದ್ದ ಸಂಪೂರ್ಣ ನಿರ್ಬಂಧವನ್ನು ರಾಜ್ಯ ಸರ್ಕಾರ ಬುಧವಾರ ಸಡಿಲಗೊಳಿಸಿದ್ದು, ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ.

ಕೊರೋನಾ ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ಉಳಿದ ಕಾರ್ಖಾನೆಗಳಿಗೆ ಕೊರೋನಾ ನಿಯಮ ಪಾಲಿಸಿ ಶೇ. 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಉತ್ಪಾದನಾ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಿದ್ದ ರಾಜ್ಯ ಸರ್ಕಾರ ಗಾರ್ಮೆಂಟ್ ಫ್ಯಾಕ್ಟರಿಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಆದೇಶ ಮಾಡಿತ್ತು. 

ಇದರಿಂದ ಅಸಮಧಾನಗೊಂಡಿದ್ದ ಗಾರ್ಮೆಂಟ್ ಫ್ಯಾಕ್ಟರಿ ಅಸೋಷಿಯೇಷನ್ ವತಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದು, ಸಂಪೂರ್ಣ ಬಂದ್ ಮಾಡುವುದರಿಂದ ಗಾರ್ಮೆಂಟ್ ಉದ್ಯಮ ಸಂಕಷ್ಟಕ್ಕೆ ಸಿಲುಕುವಂತಾಗುತ್ತದೆ. ಅಲ್ಲದೇ ಇಲ್ಲಿನ ಉದ್ಯೋಗಿಗಳ ಜೀವನ ನಿರ್ವಹಣೆ ಕಷ್ಟವಾಗಲಿದೆ. ಹೀಗಾಗಿ ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರು. ಅವರ ಮನವಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೇ. 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕೊರೋನಾ ನಿಯಮವನ್ನು ಪಾಲಿಸಿ ಗಾರ್ಮೆಂಟ್ ಚಟುವಟಿಕೆ ನಡೆಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಗಾರ್ಮೆಂಟ್ ಕೆಲಸಕ್ಕೆ ಹಾಜರಾಗುವ ಕಾರ್ಮಿಕರಿಗೆ ಸಂಬಂಧಪಟ್ಟ ಫ್ಯಾಕ್ಟರಿಯಿಂದ ಪಾಸ್ ನೀಡುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel