ರಾಜ್ಯ

ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ದಾಖಲೆಯ 270 ಮಂದಿ ಬಲಿ, ಬೆಂಗಳೂರಿನಲ್ಲಿ 19,637 ಸೇರಿ 35,024 ಮಂದಿಗೆ ಸೋಂಕು

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು ದಾಖಲೆಯ 270 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ 15,306ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 35,024 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 14,74,846ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 19,637 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 7,29,984ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 143 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 14,142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,10,025ಕ್ಕೆ ಏರಿಕೆಯಾಗಿದೆ. ಇನ್ನು 3,49,496 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 2,431 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT