ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರಿನಲ್ಲಿ ಹೆಚ್ಚಿದ ಕೊರೋನಾ: ತವರು ಜಿಲ್ಲೆಗಳಿಗೆ ಮರಳುತ್ತಿರುವ ಜನ, ಜಿಲ್ಲಾ ಮಟ್ಟದಲ್ಲಿ ಸೋಂಕು ಉಲ್ಬಣ ಸಾಧ್ಯತೆ

ಕಳೆದ ಕೆಲವು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ತಗುಲುವ ಭೀತಿಯಿಂದಾಗಿ ಜನರು ರಾಜ್ಯದಲ್ಲಿರುವ ತಮ್ಮ ತಮ್ಮ ತವರು ಜಿಲ್ಲೆಗಳಿಗೆ ಮರಳುತ್ತಿದ್ದಾರೆ. ಇದರಿಂದ ಸೋಂಕು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಂಗ್ರಹ ಚಿತ್ರ
Manjula VN
Updated On : 29 Apr 2021, 1:11 pm

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ತಗುಲುವ ಭೀತಿಯಿಂದಾಗಿ ಜನರು ರಾಜ್ಯದಲ್ಲಿರುವ ತಮ್ಮ ತಮ್ಮ ತವರು ಜಿಲ್ಲೆಗಳಿಗೆ ಮರಳುತ್ತಿದ್ದಾರೆ. ಇದರಿಂದ ಸೋಂಕು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
 
ರಾಜ್ಯದಲ್ಲಿ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ 14 ದಿನಗಳ ಕೊರೋನಾ ಕರ್ಫ್ಯೂ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಜನರು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಧಾರವಾರ ಹಾಗೂ ಇತರೆ ಜಿಲ್ಲೆಗಳಿಗೆ ಬೆಂಗಳೂರಿನಿಂದ ಖಾಸಗಿ ವಾಹನಗಳು, ರೈಲು ಹಾಗೂ ಇತರೆ ವಾಹನ ಸೇವೆಗಳ ಮೂಲಕ ತೆರಳುತ್ತಿದ್ದಾರೆ. 

ಸೋಂಕು ಹರಡುವುದನ್ನು ತಪ್ಪಿಸುವ ಸಲುವಾಗಿಯೇ ಬೆಂಗಳೂರು ಮತ್ತು ಮಹಾರಾಷ್ಟ್ರದಲ್ಲಿರುವ ಹಲವಾರು ಖಾಸಗಿ ಕಂಪನಿಗಳು ತಮ್ಮ ತಮ್ಮ ನೌಕರರಿಗೆ ವರ್ಕ್ ಫ್ರಮ್ ಹೋಮ್ ಆಯ್ಕೆಯನ್ನು ನೀಡಿದೆ. ಆದರೆ, ಬೆಂಗಳೂರಿನ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡುತ್ತಿರುವವರು ಉದ್ಯೋಗಿಗಳು ಗ್ರಾಮೀಣ ರಾಜ್ಯದಲ್ಲಿರುವ ತಮ್ಮ ತವರು ಜಿಲ್ಲೆಗಳಿಗೆ ಮರಳುತ್ತಿದ್ದಾರೆ. ಸೋಂಕು ಹೆಚ್ಚಿರುವ ನಗರದಿಂದ ಜನರು ಮತ್ತೊಂದೆಡೆ ವಲಸೆ ಹೋಗುವುದರಿಂದ ಸೋಂಕು ಉಲ್ಬಣಗೊಳ್ಳುವ ಸಾಧ್ಯತೆಗಳಿದ್ದು, ಹೀಗಾಗಿ ಜಿಲ್ಲೆ ಹಾಗೂ ಗ್ರಾಮಗಳಲ್ಲಿರುವ ಜನರು ಆತಂಕಕ್ಕೊಳಗಾಗಿದ್ದಾರೆ. 

ಈ ನಡುವೆ ಹೇಳಿಕೆ ನೀಡಿರುವ ಬೆಳಗಾವಿ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಅವರು, ಕಳೆದ ಕೆಲವು ವಾರಗಳಿಂದ ಬೆಂಗಳೂರು ಹಾಗೂ ಮಹಾರಾಷ್ಟ್ರಗಳಿಂದ ಸಾಕಷ್ಟು ಜನರು ಬರುತ್ತಿದ್ದಾರೆ. ಮಹಾರಾಷ್ಟ್ರ ಹಾಗೂ ಬೆಂಗಳೂರಿನಿಂದ ಬರುವ ಲಕ್ಷಣವಿರುವ ಜನರನ್ನು ಪತ್ತೆ ಹಚ್ಚಲು ನಮ್ಮಿಂದ ಸಾಧ್ಯವಾದಷ್ಟು ಶ್ರಮ ಪಡುತ್ತಿದ್ದೇವೆಂದು ಹೇಳಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement