ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಕೋವಿಡ್ ಪರಿಹಾರನಿಧಿಗೆ ಸಚಿವರ 1 ವರ್ಷದ ವೇತನ ಹಾಗೂ ಶಾಸಕರ 1 ತಿಂಗಳ ವೇತನ ನೀಡಲು ಸಿಎಂ ಸಲಹೆ

ರಾಜ್ಯದಲ್ಲಿ ಕೋವಿಡ್ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು ಸಲಹೆ ಹಾಗೂ ಕೃತಕ ಆಕ್ಸಿಜನ್ ರೆಮಿಡೆಸ್ವಿಯರ್ ಅಭಾವ ಸೃಷ್ಟಿಯಾಗದಂತೆ ಎಚ್ಚೆತ್ತುಕೊಳ್ಳುವ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಪರಸ್ಪರ ಸಹಕರಿಸಿ ಕಾರ್ಯೋನ್ಮುಖರಾಗುವ ಬಗ್ಗೆ ಚರ್ಚಿಸಲಾಯಿತು.

ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಸಿದ ಸಿಎಂ, ಕೋವಿಡ್ ಸೋಂಕು ತಡೆಗಟ್ಟುವ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆಯೂ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನ, ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು  ಮಾಸ್ಕ್ ದಾರಣೆ,  ಅಂತರ ಕಾಯ್ದುಕೂಳ್ಳುವುದನ್ನಹ ಜಿಲ್ಲಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕೆಂದರು. ಇನ್ನೂ ಕೋವಿಡ್ ಕೇರ್ ಸೆಂಟರುಗಳನ್ನು ತೆರೆದಿಲ್ಲದಂತಹ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರುಗಳನ್ನು ಆದ್ಯತೆಯ ಮೇರೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗು ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರಗಳನ್ನು ತೆರೆಯಬೇಕು ಇದಕ್ಕಾಗಿ ವಸತಿ ಶಾಲೆಗಳು, ಹಾಸ್ಟೆಲ್ ಗಳನ್ನು ಬಳಸಿಕೂಳ್ಳಲು ಸಿಎಂ ಸಭೆಯಲ್ಲಿ ಸೂಚಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ರೋಗಿಗಳಿಗೆ ಹಳ್ಳಿಗಳಲ್ಲಿ ಸರಿಯಾದ ಕಾಳಜಿ ವಹಿಸಲು ನಿರ್ದೇಶನ ನೀಡಬೇಕೆಂದರು. ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಆಗಿದ್ದು, ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲು ಕ್ರಮ ವಹಿಸುವಂತೆ ಹಾಗೂ ಇವರ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನಸೀಮಿತಗೊಳಿಸಿ 24 ತಾಸುಗಳಲ್ಲಿ ಪರೀಕ್ಷಾ ಫಲಿತಾಂಶ  ಕೊಡುವ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಪರೀಕ್ಷೆಗಳನ್ನು ಕೂಡಲೇ ಪೂರ್ಣಗೊಳಿಸಬೇಕು.

ಎಲ್ಲಾ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸರಿಯಾದ ಸಮಯದಲ್ಲಿ ತಲುಪುವಂತೆ ಮಾಡಬೇಕು. ಪ್ರತಿ ಆಸ್ಪತ್ರೆಯಲ್ಲಿ ರೆಮಿಡಿಸಿವರ್ ಔಷಧ ಹಾಗೂ ಆಕ್ಸಿಜನ್ ಬಗ್ಗೆ ಆಡಿಟ್ ಆಗಬೇಕು. ರೆಮ್ ಡಿಸಿವಿರ್ ಮತ್ತು ಆಕ್ಸಿಜನೇಟೆಡ್ ಬೆಡ್ ಗಳ ವಿವೇಚನಾರಹಿತ ಬಳಕೆಯಾಗದಂತೆ ತಡೆಗಟ್ಟಬೇಕು. ವೆಂಟಿಲೇಟರ್ ಬೆಡ್ ಗಳನ್ನು ಸಹ ಅತ್ಯಂತ ವಿವೇಚನೆಯಿಂದ ಬಳಸಬೇಕು. ಅಗತ್ಯವಿರುವವರಿಗೆ ಮಾತ್ರ ಈ ಇಂಜೆಕ್ಷನ್ ಹಾಗೂ ಆಕ್ಸಿಜನೇಟೆಡ್ ಬೆಡ್ ಗಳನ್ನು ಒದಗಿಸುವ ಮೂಲಕ ಕೃತಕ ಅಭಾವ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಯಾವುದಾದರೂ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾದರೆ, ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲೆಯಿಂದ ಪಡೆದುಕೊಳ್ಳುವಂತೆ, ಜಿಲ್ಲಾಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಇದಕ್ಕಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಹಾಗೂ ಇತರೆ ಸಂಪನ್ಮೂಲಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳಬೇಕು. ಮೈಸೂರಿನಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಲ್ಲಿ ಇರುವ ಒಟ್ಟು 5 ಆಕ್ಸಿಜನ್ ಜನರೇಟಿಂಗ್ ಘಟಕಗಳ ಪೈಕಿ ಎರಡು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಮೂರು ಘಟಕಗಳ ದುರಸ್ತಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಯಿತು.

ಕೃಷಿ ಚಟುವಟಿಕೆಗಳು, ಸರ್ಕಾರ ಅನುಮತಿಸಿರುವ ಕೈಗಾರಿಕೆ ಮತ್ತಿತರ ಚಟುವಟಿಕೆಗಳು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಬಾಧಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!