ದುಬಾರೆಯಲ್ಲಿರುವ ಕುಶ ಆನೆ 
ರಾಜ್ಯ

'ಕುಶ' ಆನೆಗೆ ರೇಡಿಯೋ ಕಾಲರ್ ಅಳವಡಿಸಿ ಕಾಡಿಗೆ ಬಿಡಲು ಅರವಿಂದ ಲಿಂಬಾವಳಿ ಆದೇಶ

ಅರಣ್ಯ ಇಲಾಖೆ ಸೆರೆ ಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ 'ಕುಶ'ನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ

ಮಡಿಕೇರಿ: ಅರಣ್ಯ ಇಲಾಖೆ ಸೆರೆ ಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ 'ಕುಶ'ನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ.

ಬುಧವಾರ ಈ ಸಂಬಂಧ ಸಚಿವರು ತಮ್ಮ ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ  ತಪ್ಪಿಸಿಕೊಂಡ ಆನೆ 'ಕುಶ'ನನ್ನು ಸೆರೆ ಹಿಡಿದು ತರಲಾಗಿತ್ತು. ಅಂತಿಮವಾಗಿ ಸಚಿವರು 'ಕುಶ' ಆನೆಗೆ ರೋಡಿಯೋ ಕಾಲರ್ ಅಳವಡಿಸಿ, ಬಿಡುಗಡೆ ಮಾಡಲು ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡುಬಿಡುಗಡೆ ಮಾಡಲು ಆದೇಶಿಸಿದರು.

29 ವರ್ಷದ ಕುಶ ಆನೆ  ಸುಮಾರು ಮೂರು ವರ್ಷಗಳ ಹಿಂದೆ ಕೊಡಗಿನ ಚೆಟ್ಟಳ್ಳಿ ವ್ಯಾಪ್ತಿಯಲ್ಲಿ ಬೆಳೆಗಳು ಮತ್ತು ಆಸ್ತಿಪಾಸ್ತಿಗೆ ಹಾನಿಯಾದ ನಂತರ ಸೆರೆಹಿಡಿಯಲಾಗಿತ್ತು. ಆದಾಗ್ಯೂ, ಮಾರ್ಚ್ 2020 ರಲ್ಲಿ ಕುಶ ಸೆರೆಯಿಂದ ತಪ್ಪಿಸಿಕೊಂಡಿತ್ತು. ಅಂತಿಮವಾಗಿ ಈ ವರ್ಷದ ಮಾರ್ಚ್ ನಲ್ಲಿ ಆನೆಯನ್ನು ಸೆರೆ ಹಿಡಿಯಲಾಗಿತ್ತು.

ವನ್ಯ ಜೀವಿ ಕಾರ್ಯಕರ್ತೆ ಮತ್ತು ಸಂಸದ ಮೇನಕಾ ಗಾಂಧಿ ಕುಶ ಆನೆಯ ಕಥೆಯ ಬಗ್ಗೆ ತಿಳಿದುಕೊಂಡರು ಮತ್ತು ಆನೆ ಯಾವುದೇ ಮಾನವನಿಗೆ ಹಾನಿ ಮಾಡದ ಕಾರಣ ಅವರನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಒತ್ತಡ ಹೇರಿದರು. ದುಬಾರೆ ಕ್ಯಾಂಪ್‌ನಲ್ಲಿರುವ ಅರಣ್ಯ ಅಧಿಕಾರಿಗಳು ಕುಶ ಆನೆ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆಂದು ಆರೋಪಿಸಿ  ಅದನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 'ಕುಶ' ಆನೆಗೆ ರೋಡಿಯೋ ಕಾಲರ್ ಅಳವಡಿಸಿ ಕಾಡಿಗೆ ಬಿಡಲು ತೀರ್ಮಾನಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!