2ನೇ ಡೋಸ್ ಕೋವಿಡ್-19 ಲಸಿಕೆ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ 2ನೇ ಡೋಸ್ ಕೋವಿಡ್-19 ಲಸಿಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು:ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ 2ನೇ ಡೋಸ್ ಕೋವಿಡ್-19 ಲಸಿಕೆ ಪಡೆದುಕೊಂಡಿದ್ದಾರೆ.
ಮಾರ್ಚ್ 15 ರಂದು ಮೊದಲ ಡೋಸ್ ಕೋವಿಡ್-19 ಲಸಿಕೆ ಪಡೆದುಕೊಂಡಿದ್ದ ಸಿದ್ದರಾಮಯ್ಯ,ಗುರುವಾರ ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಅವರಿಗೂ ಕೋವಿಡ್ ಸೋಂಕು ತಗುಲಿತ್ತು. ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದಾದ ಬಳಿಕ ಸಾಕಷ್ಟು ಎಚ್ಚರಿಕೆಯನ್ನು ವಹಿಸಿರುವ ಸಿದ್ದರಾಮಯ್ಯ, ಕೋವಿಡ್-19 ನಿರ್ವಹಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿ ಹಾಗೂ ಕೆಲವೊಂದಿಷ್ಟು ಸಲಹೆಗಳನ್ನು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿನ್ನೆ ಪತ್ರ ಬರೆದಿದ್ದರು.
ಕೋವಿಡ್ ಲಸಿಕೆಯನ್ನು ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ನೀಡಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಆನ್ಲೈನ್ ಮೂಲಕ ನೋಂದಣಿ ಕಾರ್ಯ ನಡೆಯುತ್ತಿದೆ.ಬುಧವಾರ 4 ಗಂಟೆಯಿಂದ ನೋಂದಣಿ ಕಾರ್ಯ ಆರಂಭಗೊಂಡಿದ್ದು ಸುಮಾರು 70 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.