ಚಾಮರಾಜನಗರದಲ್ಲಿ 30 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು: ಕೊರೊನಾ ಕರ್ಫ್ಯೂ ವೇಳೆ ಸಿಬ್ಬಂದಿ ಕೊರತೆ!
ಜಿಲ್ಲೆಯ 30 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಅಂಟುಕೊಂಡಿದ್ದು, ಸದ್ಯ ಅವರೆಲ್ಲರೂ ಕ್ವಾರಂಟೈನ್ನಲ್ಲಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ತಿಳಿಸಿದ್ದಾರೆ.
ಚಾಮರಾಜನಗರ: ಜಿಲ್ಲೆಯ 30 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಅಂಟುಕೊಂಡಿದ್ದು, ಸದ್ಯ ಅವರೆಲ್ಲರೂ ಕ್ವಾರಂಟೈನ್ನಲ್ಲಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ತಿಳಿಸಿದ್ದಾರೆ.
ಕೋವಿಡ್ ಕರ್ಫ್ಯೂ ಪರಿಶೀಲನೆಗೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 30 ಮಂದಿ ಸೋಂಕಿತರು ಸೇರಿ ಪ್ರಾಥಮಿಕ ಸಂಪರ್ಕಿತರು ಕೂಡ ಕ್ವಾರಂಟೈನ್ನಲ್ಲಿದ್ದು, ಸಿಬ್ಬಂದಿ ಕೊರತೆ ಎದುರಾಗಿದೆ ಎಂದರು.
ಪ್ರಸ್ತುತ ಹೆಚ್ಚಿನ ಹೋಂ ಗಾರ್ಡ್ಸ್ಗಳ ಅವಶ್ಯಕತೆವಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ ಎಂದರು.
ಜಿಲ್ಲೆಯಲ್ಲಿ 22 ಅಂತಾರಾಜ್ಯ ಹಾಗೂ ಅಂತರ ತಾಲೂಕು ಚೆಕ್ ಪೋಸ್ಟ್ಗಳಿದ್ದು, ಎಲ್ಲಾ ಕಡೆ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ. ಇನ್ನು, ಕಂದಾಯ ಇಲಾಖೆ ಮತ್ತು ವೈದ್ಯಕೀಯ ಸಿಬ್ಬಂದಿ ಅಗತ್ಯವಿದೆ ಎಂದು ಅವರು ಮಾಹಿತಿ ನೀಡಿದರು.
ಕಳೆದ 3 ದಿನಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಒಟ್ಟು 80 ಎಫ್ಐಆರ್ ದಾಖಲಿಸಲಾಗಿದೆ. ಸುಖಾಸುಮ್ಮನೆ ರಸ್ತೆಗಳಿದ ವಾಹನಗಳನ್ನು ಜಪ್ತಿ ಮಾಡಿ ದಂಡ ವಿಧಿಸಲಾಗುತ್ತಿದೆ. ಸಾರ್ವಜನಿಕರು ತುರ್ತು ಪರಿಸ್ಥಿತಿಯನ್ನು ಅರಿತು ಅನಗತ್ಯ ಸಂಚಾರ ಮಾಡಬಾರದು ಎಂದು ಅವರು ಮನವಿ ಮಾಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.