ರಾಜ್ಯ

ಕೊಡಗಿನಲ್ಲಿ ಒಂದೇ ದಿನ 436 ಮಂದಿಯಲ್ಲಿ ಕೊರೋನಾ ಪತ್ತೆ: ಪಾಸಿಟಿವಿಟಿ ಪ್ರಮಾಣ ಶೇ.22.4ಕ್ಕೆ ಏರಿಕೆ

Manjula VN

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 436 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.22.4ಕ್ಕೆ ಏರಿಕೆಯಾಗಿದೆ. 

ಏಪ್ರಿಲ್ ತಿಂಗಳ ಮೊದಲ ಮೂರು ವಾರಗಳಲ್ಲಿ ಒಂದಕ್ಕಿಯಲ್ಲಿ ದಾಖಲಾಗುತ್ತಿದ್ದ ಸೋಂಕಿತರ ಸಂಖ್ಯೆ ಇದೀಗ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜನರದಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. 

ಕಳೆದ 9 ದಿನಗಳಿಂದ ಜಿಲ್ಲೆಯಲ್ಲಿ ಪ್ರತೀನಿತ್ಯ 357ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು, ಏಪ್ರಿಲ್ 24ರಂದು ಬರೋಬ್ಬರಿ 548 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. 

ಏಪ್ರಿಲ್ 1ರವರೆಗೂ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 73 ಹಾಗೂ ಸಾವಿನ ಸಂಖ್ಯೆ 83ರಷ್ಟಿತ್ತು. ಆದರೆ, ಏಪ್ರಿಲ್ 21ರ ಬಳಿಕ ಈ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. 

ನಿನ್ನೆ ಒಂದೇ ದಿನ ಕೊಡಗಿನಲ್ಲಿ 436 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,266ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 6 ಮಂದಿ ಸಾವನ್ನಪ್ಪವುದರೊಂದಿಗೆ ಸಾವಿನ ಸಂಖ್ಯೆ 102ಕ್ಕೆ ತಲುಪಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 433 ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. 

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಪ್ರತೀನಿತ್ಯ 1600 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಸಾರಿ ಪ್ರಕರಣ ಹಾಗೂ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್ ಅವರು ಹೇಳಿದ್ದಾರೆ. 

SCROLL FOR NEXT