ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾದಿಂದ 25 ಸಾವು: ಬೆಂಗಳೂರಿನಲ್ಲಿ 409 ಸೇರಿ 1,875 ಕೊರೋನಾ ಪ್ರಕರಣ ಪತ್ತೆ!

ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,875 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,06,999ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,875 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,06,999ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 25 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,587ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 409 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,27,748ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,502 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,46,244ಕ್ಕೆ ಏರಿಕೆಯಾಗಿದೆ. ಇನ್ನು 24,144 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,55,048 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,875 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.20ಕ್ಕೆ ಇಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ

SCROLL FOR NEXT