ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ ಮತ್ತು ಇತರ ನಾಯಕರು 
ರಾಜ್ಯ

ಬೆಳ್ಳಂಬೆಳಗ್ಗೆ ಸೈಕಲ್ ಏರಿದ ಸಿಎಂ ಬೊಮ್ಮಾಯಿ:'ಚೀರ್ ಫಾರ್ ಇಂಡಿಯಾ' ಸೈಕಲ್ ಜಾಥಾಕ್ಕೆ ಚಾಲನೆ 

ರಾಜಕೀಯ ನಾಯಕರೆಂದರೆ ಬಿಳಿ ಶರ್ಟ್, ಪಂಜೆ, ಪೈಜಾಮ, ಪ್ಯಾಂಟ್  ಧರಿಸಿಕೊಂಡು ಓಡಾಡುವುದು ಸಾಮಾನ್ಯ ಸಂಗತಿ. ನಾಡಿನ ಮುಖ್ಯಮಂತ್ರಿಯಾಗಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದ ಮುಖ್ಯಮಂತ್ರಿ ಭಾನುವಾರ ಬೆಳ್ಳಂಬೆಳಗ್ಗೆ ಪ್ಯಾಂಟ್ ಟೀ ಶರ್ಟ್ ಧರಿಸಿ ಸೈಕಲ್ ಏರಿದ್ದಾರೆ.

ಬೆಂಗಳೂರು: ರಾಜಕೀಯ ನಾಯಕರೆಂದರೆ ಬಿಳಿ ಶರ್ಟ್, ಪಂಜೆ, ಪೈಜಾಮ, ಪ್ಯಾಂಟ್  ಧರಿಸಿಕೊಂಡು ಓಡಾಡುವುದು ಸಾಮಾನ್ಯ ಸಂಗತಿ. ನಾಡಿನ ಮುಖ್ಯಮಂತ್ರಿಯಾಗಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದ ಮುಖ್ಯಮಂತ್ರಿ ಭಾನುವಾರ ಬೆಳ್ಳಂಬೆಳಗ್ಗೆ ಪ್ಯಾಂಟ್ ಟೀ ಶರ್ಟ್ ಧರಿಸಿ ಸೈಕಲ್ ಏರಿದ್ದಾರೆ.

ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ವಿಧಾನಸೌಧದ ಮುಂಭಾಗದ ಡಾ. ಬಿ.ಆರ್.ಅಂಬೇಡ್ಕರ್ ವೀಧಿಯಲ್ಲಿ "Cheer 4 India, be like an Olympian - Cycling ride" ಘೋಷವಾಕ್ಯದಡಿ ಆಯೋಜಿಸಿದ್ದ “ಸೈಕಲ್ ರೈಡ್' ಗೆ ಚಾಲನೆ ನೀಡಿದರು. ಒಲಿಂಪಿಕ್ಸ್ ನಲ್ಲಿ ಪಾಲ್ಗೊಂಡಿರುವ ದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಸೈಕಲ್ ರ್ಯಾಲಿ ಇದಾಗಿತ್ತು. 

ಈ ವೇಳೆ ಸೈಕಲ್ ಏರಿ ಜಾಥಾ ಹೋಗಿ ಬಂದರು. ಮುಖ್ಯಮಂತ್ರಿಗಳಿಗೆ ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದ ಗೌಡ, ಲೋಕಸಭಾ ಸದಸ್ಯರಾದ ಪಿ ಸಿ ಮೋಹನ್, ತೇಜಸ್ವಿ ಸೂರ್ಯ ಮೊದಲಾದವರು ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರತಿ ವಿಷಯ, ಅಂಶಕ್ಕೂ ಸೂಕ್ಷ್ಮವಾಗಿ ಸ್ಪಂದಿಸುವ ಪ್ರಧಾನ ಮಂತ್ರಿ ಮೋದಿ ಭಾರತ ಮತ್ತು ಭಾರತೀಯತೆಗೆ ಸದಾ ತುಡಿಯುತ್ತಾರೆ, ಪ್ರತಿ ಹೆಜ್ಜೆಗೂ ಯುವ ಜನತೆಗೆ ಸ್ಪೂರ್ತಿ ತುಂಬುತ್ತಿದ್ದಾರೆ ಎಂದು ಹೇಳಿದರು.

ಸ್ವಚ್ಛ ಭಾರತದಿಂದ ಹಿಡಿದು ಪ್ರತಿಯೊಂದು ಕಾರ್ಯಕ್ರಮದಲ್ಲಿ ಮೋದಿಯವರ ಸೂಕ್ಷ್ಮ ಸಂವೇದನೆ ಎದ್ದು ಕಾಣುತ್ತದೆ. ಖೇಲೋ ಇಂಡಿಯಾ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಿದರೆ, ಜೀತೋ ಇಂಡಿಯಾ ಮೂಲಕ ಕ್ರೀಡಾಪಟುಗಳಿಗೆ ಹುರಿದುಂಬಿಸುತ್ತಿದ್ದಾರೆ. ಅದರ ಭಾಗವಾಗಿ ದೇಶಾದ್ಯಂತ ನಡೆಯುತ್ತಿರುವ ಸೈಕಲ್ ರ್ಯಾಲಿಯಲ್ಲಿ 56 ಸಾವಿರ ಮಂದಿ ಯುವಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ನಾನು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಯುವ ಸಮೂಹ ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ಉಂಟುಮಾಡಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT