ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಿಎಂ ಬೊಮ್ಮಾಯಿ 
ರಾಜ್ಯ

ಕೋವಿಡ್ ಆತಂಕ: ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಣ್ಗಾವಲು, ಸಂಚಾರ ನಿರ್ಬಂಧ ವಿಸ್ತರಣೆ

ಗಡಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಗಮನಾರ್ಹ ರೀತಿಯಲ್ಲ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳ ಕೈಗೊಳಅಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ. 

ಬೆಂಗಳೂರು: ಗಡಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಗಮನಾರ್ಹ ರೀತಿಯಲ್ಲ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳ ಕೈಗೊಳಅಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ. 

ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬೊಮ್ಮಾಯಿಯವರು ವಿಡಿಯೋ ಕಾನ್ಫರೆನ್ಸ್​ ನಡೆಸಿ, ಮಾತುಕತೆ ನಡೆಸಿದರು.

ಈ ವೇಳೆ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದ್ದು, ಈ ರಾಜ್ಯಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಗಡಿ ಪ್ರದೇಶ ಪ್ರದೇಶಗಳಲ್ಲಿ ರ್ಯಾಂಡಮ್ ಪರೀಕ್ಷೆಗಳನ್ನೂ ಪರಿಣಾಮಕಾರಿಯಾಗಿ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ದಕ್ಷಿಣ ಕನ್ನಡ  ಮತ್ತು ಉಡುಪಿಯಲ್ಲಿ ಪಾಸಿಟಿವಿಟಿ ದರ ಶೇ.1-4.5ಕ್ಕೆ ಏರಿಕೆಯಾಗಿದೆ. ಈ ಪ್ರಮಾಣವನ್ನು ಕಡಿಮೆ ಮಾಡಬೇಕಿದೆ. ಡಿಸಿ ಮತ್ತು ಎಸ್​ಪಿಗಳು ಎರಡು ದಿನಗಳಿಗೊಮ್ಮೆ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

ಅದಲ್ಲದೆ, ಸಭೆಯಲ್ಲಿ ರೈಲ್ವೇ ನಿಲ್ದಾಣಗಳು ಹಾಗೂ ರಾಜ್ಯ ಇತರೆ ಪ್ರವೇಶ ಪ್ರದೇಶಗಳಲ್ಲಿಯೂ ಹೆಚ್ಚಿನ ಕಣ್ಗಾವಲಿಸಿರುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಬೇರೆ ರಾಜ್ಯಗಳಿಂದ ಪ್ರತೀನಿತ್ಯ ರಾಜ್ಯಕ್ಕೆ ಓಡಾಡುವ ಪ್ರಯಾಣಿಕರಿಗೆ 15 ದಿನಗಳಿಗೊಮ್ಮೆ ನೀಡುತ್ತಿದ್ದ ಪಾಸ್'ನ್ನು ವಾರದ ಪಾಸ್ ಗಲಂತೆ ವಿತರಿಸಬೇಕು. ಅಂತಹವರು ವಾರಕ್ಕೊಮ್ಮೆ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವಂತೆ ಮಾಡಬೇಕು. ಇನ್ನು ಇತರೆ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ಹಾಸ್ಟೆಲ್ ಗಳಲ್ಲಿ ಕ್ವಾರಂಟೈನ್ ಗೊಳಗಾಗಬೇಕು. ಹೋಂಸ್ಟೇ ಹಾಗೂ ರೆಸಾರ್ಟ್ ಗಳಲ್ಲಿ ಉಳಿದುಕೊಳ್ಳುವ ಜನರ ಬಳಿ ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಇರುವುದು ಕಡ್ಡಾಯವಾಗಿದೆ ಸರ್ಕಾರ ಆದೇಶಿಸಿದೆ. 

ಈ ನಡುವೆ ಸರ್ಕಾರಿ ಶಾಲೆಯ ಶೇ.72 ರಷ್ಟು ಶಿಕ್ಷಕರಿಗೆ ಲಸಿಕೆಗಳನ್ನು ನೀಡಲಾಗಿದ್ದು, ಇನ್ನುಳಿದವರಿಗೆ 15 ದಿನಗಳೊಳಗಾಗಿ ಲಸಿಕೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇನ್ನು ಕೆಲವೇ ದಿನಗಳಲ್ಲಿ ಶಾಲೆಗಳು ಪುನರಾರಂಭಗೊಳ್ಳುವ ಸಾಧ್ಯತೆಗಳಿದ್ದು, ಖಾಸಗಿ ಶಾಲೆಗಳೊಂದಿಗೆ ಶೀಘ್ರದಲ್ಲಿಯೇ ಸಿಎಂ ಬೊಮ್ಮಾಯಿಯವರು ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT