ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಯಾರೇ ಊಟ ಬಿಟ್ಟರೂ ನಾವು ಮೇಕೆದಾಟು ಬಿಡಲ್ಲ: ತ.ನಾಡು ಅಣ್ಣಾಮಲೈ ಉಪವಾಸ ಸತ್ಯಾಗ್ರಹಕ್ಕೆ ಸಿಎಂ ಬೊಮ್ಮಾಯಿ ತೀಕ್ಷ್ಣ ಪ್ರತಿಕ್ರಿಯೆ

ಮೇಕೆದಾಟಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರ ನಡೆಸುವುದಾಗಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ: ಮೇಕೆದಾಟಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರ ನಡೆಸುವುದಾಗಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾರಾದರೂ ಊಟ ಮಾಡಲಿ, ಬಿಡಲಿ, ನಾವು ಮೇಕೆದಾಟು ಅಣೆಕಟ್ಟು ನಿರ್ಮಿಸುತ್ತೇವೆಂದು ಹೇಳಿದ್ದಾರೆ. 

ಅಣ್ಣಾಮಲೈ ಅವರ ಕೆಲಸ ಮಾಡುತ್ತಾರೆ. ಅದು ನಮಗೆ ಸಂಬಂಧಿಸಿದ್ದಲ್ಲ. ಅವರು ಉಪವಾಸ ಮಾಡುವುದಕ್ಕೂ ನನಗೂ ಸಂಬಂಧವಿಲ್ಲ. ಕರ್ನಾಟಕಕ್ಕೆ ಕಾವೇರಿ ನದಿ ನೀರಿನ ಮೇಲೆ ಎಲ್ಲಾ ಹಕ್ಕುಗಳಿವೆ. ನಾವು ನಿಶ್ಚಿತವಾಗಿ ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆಂದು ತಿಳಿಸಿದ್ದಾರೆ. 

ಮೇಕೆದಾಟು ಅಣೆಕಟ್ಟು ವಿರೋಧಿಸಿ ಆ.5ರಂದು ಒಂದು ದಿನದ ಉಪವಾಸ ಕೈಗೊಳ್ಳುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!