ರಾಜ್ಯ

ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಮುಖ: ಬೆಂಗಳೂರಿನಲ್ಲಿ 290 ಸೇರಿ 1,285 ಪ್ರಕರಣ ಪತ್ತೆ; 25 ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ದಿನ ಕಳೆದಂತೆ ಹೆಚ್ಚಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ 1,285 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,08,284ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 25 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,612ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 290 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,28,038ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,383 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,47,627ಕ್ಕೆ ಏರಿಕೆಯಾಗಿದೆ. ಇನ್ನು 24,021 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,33,030 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,285 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.96ಕ್ಕೆ ಇಳಿದಿದೆ.

SCROLL FOR NEXT