ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಅನುಮಾನಾಸ್ಪದವಾಗಿ

ಡ್ರಗ್ಸ್ ಮಾರಾಟದ ಆರೋಪದಡಿ‌ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾ ಪ್ರಜೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಬೆಂಗಳೂರು: ಡ್ರಗ್ಸ್ ಮಾರಾಟದ ಆರೋಪದಡಿ‌ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾ ಪ್ರಜೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿದೇಶಿ ಪ್ರಜೆಯೋರ್ವ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದರು. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ.

ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಎದೆನೋವು ಮತ್ತು ಶೀತ ಇದೆ ಎಂದು ಆಫ್ರಿಕಾ ಪ್ರಜೆ ಪೊಲೀಸರಿಗೆ ತಿಳಿಸಿದ್ದನು. ಹೀಗಾಗಿ ತಕ್ಷಣವೇ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.

ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ವಿಭಾಗದ ಡಿಸಿಪಿ‌ ಧರ್ಮೇಂದ್ರ ಕುಮಾರ್ ಮೀನಾ, 'ಆರೋಪಿಗೆ ಶೀತ‌ ಆಗಿತ್ತು. ತನಗೆ ಎದೆ ನೋವು ಆಗುತ್ತಿದೆ ಎಂದು ಆರೋಪಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆತನನ್ನು ಶೀಘ್ರವೇ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಅಲ್ಲಿಯೇ‌ ಕೊನೆಯುಸಿರೆಳೆದಿದ್ದಾರೆ ಎಂದರು.

ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಆಫ್ರಿಕನ್ ಪ್ರಜೆಗಳು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೃತ ಆಫ್ರಿಕನ್ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಸ್ಥಳಕ್ಕೆ ಬರುವಂತೆ ಅವರು ಪ್ರತಿಭಟನೆಯಲ್ಲಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ