ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ 3ನೇ ಅಲೆ ಆತಂಕ: ಈ ಬಾರಿಯ ಹಬ್ಬ, ಉತ್ಸವಗಳ ಸರಳ ಆಚರಣೆಗೆ ಸರ್ಕಾರ ಚಿಂತನೆ

ರಾಜ್ಯದಾದ್ಯಂತ ಇನ್ನು ಕೆಲವೇ ದಿನಗಳಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಲಿವೆ. ಪ್ರಮುಖವಾಗಿ ವರಮಹಾಲಕ್ಷ್ಮೀ, ಗಣೇಶ ಚತುರ್ಥಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಎಂದರೆ ಎಲ್ಲಿಲ್ಲದ ಸಡಗರ, ಸಂಭ್ರಮ. ಆದರೆ, ಕೋವಿಡ್ 3ನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯೂ ಹಬ್ಬ ಹಾಗೂ ಉತ್ಸವಗಲನ್ನು ಸರಳವಾಗಿ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ. 

ಬೆಂಗಳೂರು: ರಾಜ್ಯದಾದ್ಯಂತ ಇನ್ನು ಕೆಲವೇ ದಿನಗಳಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಲಿವೆ. ಪ್ರಮುಖವಾಗಿ ವರಮಹಾಲಕ್ಷ್ಮೀ, ಗಣೇಶ ಚತುರ್ಥಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಎಂದರೆ ಎಲ್ಲಿಲ್ಲದ ಸಡಗರ, ಸಂಭ್ರಮ. ಆದರೆ, ಕೋವಿಡ್ 3ನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯೂ ಹಬ್ಬ ಹಾಗೂ ಉತ್ಸವಗಲನ್ನು ಸರಳವಾಗಿ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ. 

ಈ ನಡುವೆ ಆರೋಗ್ಯ ತಜ್ಞರೂ ಕೂಡ ಸಾಕಷ್ಟು ಎಚ್ಚರಿಕೆ ವಹಿಸುವಂತೆ ಸರ್ಕಾರಕ್ಕೆ ಸಲಹೆಗಳನ್ನು ನೀಡುತ್ತಿದ್ದಾರೆ. ಹಬ್ಬಗಳ ಸಂದರ್ಭದಲ್ಲಿ ಹೆಚ್ಚೆಚ್ಚು ಜನರು ಒಂದೆಡೆ ಸೇರುವ ಸಾಧ್ಯತೆಗಳು ಹೆಚ್ಚಾಗಿದ್ದು, ಈ ರೀತಿಯಾಗಿದ್ದೇ ಆದರೆ, 2ನೇ ಅಲೆಯ ಪರಿಸ್ಥಿತಿ ಮತ್ತೊಮ್ಮೆ ಬಂದೊದಗಿಲಿದೆ ಎಂದು ಎಚ್ಚರಿಸುತ್ತಿದ್ದಾರೆ. 

ರಾಜ್ಯದ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ.ಸಿಎನ್.ಮಂಜುನಾಥ್ ಅವರು ಮಾತನಾಡಿ, ಸಂಭ್ರಮವನ್ನಾಚರಿಸಲು ಹೆಚ್ಚೆಚ್ಚು ಜನರು ಸೇರುವಂತೆ ಮಾಡಿದ್ದೇ ಆದರೆ, ಈ ಹಬ್ಬಗಳೇ ಸೂಪರ್ ಸ್ಪ್ರೆಡರ್ ಸಂದರ್ಭಗಳಾಗಬಹುದು ಎಂದು ಎಚ್ಚರಿಸಿದ್ದಾರೆ.

ದೇವಾಲಯಗಳಲ್ಲಿ ಹಾಗೂ ಇತರೆ ಪ್ರದೇಶಗಳಲ್ಲಿ ನಡೆಯುವ ಉತ್ಸವಗಳ ಮೇಲೆ ನಿರ್ಬಂಧಗಳನ್ನು ಹೇರುವ ಅಗತ್ಯವಿದೆ. ಹಬ್ಬಗಳ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸುವುದು ಆಯಾ ಉಪ ಆಯುಕ್ತರ ಜವಾಬ್ದಾರಿಯಾಗಿರುತ್ತದೆ. ಉತ್ಸವಗಳಿಗೆ ಅನುಮತಿ ನೀಡಿ ಕೆಲವೇ ಸಂಖ್ಯೆಯಲ್ಲಿ ಜನರು ಸೇರಬೇಕೆಂದು ನಿಯಮ ಹೇರುವುದು ಕೆಲಸ ಮಾಡುವುದಿಲ್ಲ. ಏಕೆಂದರೆ, ಇಂತಹ ಸಂದರ್ಭದಲ್ಲಿ ಖಂಡಿತವಾಗಿಯೂ ಜನರು ನಿಯಮಗಳ ಉಲ್ಲಂಘಿಸುತ್ತಾರೆ. ಪ್ರಮುಖವಾಗಿ ಗ್ರಾಮಗಳ ಉತ್ಸವ ಸಂದರ್ಭದಲ್ಲಿ 10-15 ಗ್ರಾಮಸ್ಥರು ಒಂದೆಡೆ ಸೇರುತ್ತಾರೆ. ಹೀಗಾಗಿ ಇಂತಹ ಉತ್ಸವಗಳಿಗೆ ಅನುಮತಿ ನೀಡಬಾರದು. ಅದಷ್ಟೇ ಅಲ್ಲದೆ, ರಾಜಕೀಯ ಪ್ರಚಾರ ಕಾರ್ಯಗಳಿಗೂ ನಿರ್ಬಂಧ ಹೇರುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. 

ಡಾ.ಎಂ.ಕೆ.ಸುದರ್ಶನ್ ಅವರು ಮಾತನಾಡಿ, 2 ಶೇಕಡಾಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ನಾವು ಯಾವುದೇ ರೀತಿಯ ಹಬ್ಬಗಳು, ಜಾತ್ರೆಗಳು, ಪೂಜೆಗಳು ಮತ್ತು ಸಾರ್ವಜನಿಕ ಸಭೆಗಳ ನಡೆಸಲು ಶಿಫಾರಸು ಮಾಡಿಲ್ಲ. ಆದರೆ, ಜನರು ತಮ್ಮ ತಮ್ಮ ಮನೆಗಳಲ್ಲಿ ಆಚರಿಸಬಹುದಾಗಿದೆ. ನೆರೆ ರಾಜ್ಯಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಜನರು ಬಹಳ ಎಚ್ಚರಿಕೆಯಿಂದ ಇರಬೇಕಿದೆ ಎಂದು ಹೇಳಿದ್ದಾರೆ.

ಜನರಿಗೆ ಲಸಿಕೆ ನೀಡುವಿಕೆ ರಾಜ್ಯ ಉತ್ತಮ ಸ್ಥಿತಿಯಲ್ಲಿದೆ. ಈ ಕಾರಣದಿಂದ ಕೊರೋನಾ 3ನೇ ಅಲೆ ಪರಿಣಾಮ ಅಷ್ಟಾಗಿ ಬೀರುವುದಿಲ್ಲ ಎಂಬ ವಿಶ್ವಾಸವಿದೆ. ಹಬ್ಬಗಳು, ರ್ಯಾಲಿಗಳ ಮೇಲೆ ನಿಷೇಧ ಹೇರುವುದರ ಜೊತೆಗೆ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವುದನ್ನೂ ಕಡ್ಡಾಯವಾಗಿ ಪಾಲನೆ ಮಾಡಬೇಕಿದೆ ಎಂದು ತಿಳಿಸಿದ್ದಾರೆ. 

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 10ರವರೆಗೂ ಸಾರ್ವಜನಿಕ ಸಭೆಗಳ ಮೇಲೆ ನಿಷೇಧ ಹೇರಲಾಗಿದೆ. ಇದಷ್ಟೇ ಅಲ್ಲದೆ, ಜಿಲ್ಲೆಯಲ್ಲಿ ಒಂದು ವಾರಗಳ ಬಾರ ಅಂತರ್ ರಾಜ್ಯ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT