ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ

ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಆರಂಭವಾಗಿದ್ದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ರಾಜಾಜಿನಗರದಲ್ಲಿ ನಡೆದಿದೆ.

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಆರಂಭವಾಗಿದ್ದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ರಾಜಾಜಿನಗರದಲ್ಲಿ ನಡೆದಿದೆ.

ಕೊಲೆಯಾದ ಯುವಕ ಸುನೀಲ್​ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶ ಮೂಲದ ಯುವಕರಿಬ್ಬರೂ ನಗರದ ಗ್ರಾನೈಟ್​ ಕೆಲಸ ಮಾಡುತ್ತಿದ್ದು, ರಾಜಾಜಿನಗರದಲ್ಲಿ ವಾಸವಾಗಿದ್ದರು. 

ಒಂದೇ ರೂಮಿನಲ್ಲಿದ್ದ ಯುವಕರು ಸೋಮವಾರ ರಾತ್ರಿ ಮದ್ಯ ಸೇವಿಸಿದ್ದರು. ಒಂದೇ ಸ್ವಿಚ್​ ಇದ್ದು, ಈ ವೇಳೆ ಚಾರ್ಜ್​ ಹಾಕುವ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ಆರಂಭವಾಗಿದೆ. ಜಗಳ ತಾರಕ್ಕಕ್ಕೇರಿದ್ದು, ಇಬ್ಬರ ನಡುವೆ ತಳ್ಳಾಟ ನಡೆದ ಪರಿಣಾಮ ಪಕ್ಕದಲ್ಲಿದ್ದ ಸೌದೆಯಿಂದ ಆರೋಪಿ ಮೃತನ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ.

ತಲೆಗೆ ಬಿದ್ದ ಏಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಸುನೀಲ್ ನನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಈ ಸಂಬಂಧ ರಾಜಾಜಿನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಚಾರಣೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT