ರಾಜ್ಯ

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ: 29 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

Vishwanath S

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. 

ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ - ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ - ಚಿಕ್ಕಬಳ್ಳಾಪುರ, ಬೈರತಿ‌ ಬಸವರಾಜ - ಕೆ ಆರ್ ಪುರಂ, ಮುರುಗೇಶ್ ನಿರಾಣಿ - ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ - ಕೆ‌ಆರ್ ಪೇಟೆ, ಸುನೀಲ್ ಕುಮಾರ್  - ಕಾರ್ಕಳ, ಅರಗ ಜ್ಞಾನೇಂದ್ರ - ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ.

ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ - ಎಂ ಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ - ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ - ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ - ಎಂ ಎಲ್ ಸಿ, ಪ್ರಭು ಚೌವ್ಹಾಣ್ - ಔರಾದ್, ವಿ ಸೋಮಣ್ಣ - ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ - ಹೊಸಪೇಟೆ, ಸಿ ಸಿ‌ ಪಾಟೀಲ್ - ನರಗುಂದ, ಬಿಸಿ ನಾಗೇಶ್ - ತಿಪಟೂರು ಮತ್ತು ಬಿ.ಶ್ರೀ ರಾಮುಲು- ಮೊಳಕಾಲ್ಮೂರು, ಬಿ.ಸಿ. ಪಾಟೀಲ್- ಹಿರೇಕೆರೂರು ಕ್ಷೇತ್ರದವರಾಗಿದ್ದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ ರನ್ನು ಸಂಪುಟದಿಂದ ಕೈಬಿಡಲಾಗಿದೆ. 

13 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ - ಮೈಸೂರು, ಕಲ್ಬುರ್ಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣಗೆರೆ, ಕೋಲಾರ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಈ ಬಾರಿ ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯವಿಲ್ಲ, ಬೆಂಗಳೂರು ನಗರಕ್ಕೆ 7 ಸಚಿವ ಭಾಗ್ಯ ಸಿಕ್ಕಿದೆ.

SCROLL FOR NEXT