ಸಾಂದರ್ಭಿಕ ಚಿತ್ರ 
ರಾಜ್ಯ

ಎರಡು ಪ್ರತ್ಯೇಕ ಆನೆ ದಾಳಿ ಪ್ರಕರಣ: ರೈತರಿಬ್ಬರ ಸಾವು

ಮಾಗಡಿ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ.

ರಾಮನಗರ: ಮಾಗಡಿ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ.

ಮೊದಲ ಘಟನೆಯಲ್ಲಿ ಮೃತನಾದ ವ್ಯಕ್ತಿಯನ್ನು ಮಾಗಡಿ ತಾಲ್ಲೂಕಿನ ಗಂಗಾಧರ್(45) ಎಂದು ಅರಣ್ಯ ಅಧಿಕಾರಿಗಳು ಗುರುತಿಸಿದ್ದಾರೆ.

ಗಂಗಾಧರ್ ಅವರು ಅಗಲಕೋಟೆ ಹ್ಯಾಂಡ್‌ಪೋಸ್ಟ್ ಬಳಿ ಆನೆಗೆ ಆಹಾರ ನೀಡಲು ಯತ್ನಿಸುತ್ತಿದ್ದಾಗ, ತುಳಿತಕ್ಕೊಳಗಾಗಿ ಅಸುನೀಗಿದ್ದಾರೆ.

ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ರುದ್ರೇಗೌಡ ಎಂಬಾತನ ಜಮೀನಿಗೆ ನುಗ್ಗಿದ ಆನೆ ಆತನ ಮೇಲೆ ದಾಳಿ ನಡೆಸಿದಾಗ ಮೃತಪಟ್ಟಿದ್ದಾರೆ. 

ಅರಣ್ಯ ಅಧಿಕಾರಿಗಳು ಆನೆಗಳನ್ನು ಮರಳಿ ಕಾಡಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಆನೆ ದಾಳಿಯಿಂದ ಸುಮಾರು 12 ರೈತರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!