ಹಾವೇರಿಯ ಶಿಗ್ಗಾಂವಿಯಲ್ಲಿರುವ ಬಸವರಾಜ ಬೊಮ್ಮಾಯಿ ಅವರ ನಿವಾಸ 
ರಾಜ್ಯ

ಬಸವರಾಜ ಬೊಮ್ಮಾಯಿ ಸಿಎಂ ಆದ ಬೆನ್ನಲ್ಲೇ ಶಿಗ್ಗಾಂವಿಗೆ ಶಾಶ್ವತ ಹೆಲಿಪ್ಯಾಡ್ 

ಬಸವರಾಜ ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಅವರ ತವರು ಜಿಲ್ಲೆ ಹಾಗೂ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಲ್ಲಿ ತಕ್ಷಣಕ್ಕೆ ಹಲವಾರು ಬದಲಾವಣೆಗಳು ಕಂಡುಬರುತ್ತಿವೆ. 

ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಅವರ ತವರು ಜಿಲ್ಲೆ ಹಾಗೂ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಲ್ಲಿ ತಕ್ಷಣಕ್ಕೆ ಹಲವಾರು ಬದಲಾವಣೆಗಳು ಕಂಡುಬರುತ್ತಿವೆ. 

ಸಿಎಂ ಹಾಗೂ ಅವರ ಶಿಗ್ಗಾಂವಿ, ಹುಬ್ಬಳ್ಳಿಯ ನಿವಾಸಗಳಲ್ಲಿ ಭದ್ರತೆಯನ್ನು ಹೆಚ್ಚುಗೊಳಿಸಲಾಗುತ್ತಿದ್ದು, ಶಿಗ್ಗಾಂವಿಯಲ್ಲಿ ಶಾಶ್ವತ ಹೆಲಿಪ್ಯಾಡ್ ನ್ನು ನಿರ್ಮಾಣ ಮಾಡಲಾಗುತ್ತಿದೆ. 

ಬೊಮ್ಮಾಯಿ ಅವರ ಎರಡೂ ನಿವಾಸಗಳ ಬಳಿ ವಾಚ್ ಟವರ್ (ಕಣ್ಗಾವಲು ಗೋಪುರಗಳು) ನಿರ್ಮಾಣವಾಗುತ್ತಿದ್ದು, 2-3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುಪ್ತಚರ ಇಲಾಖೆ ಅಧಿಕಾರಿಗಳು ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ್ದು ಹೆಲಿಪ್ಯಾಡ್ ಗೆ ಎರಡು ಸಂಭಾವ್ಯ ಪ್ರದೇಶಗಳನ್ನು ಗುರುತಿಸಿದ್ದಾರೆ.  ಒಂದು ಕಂದಾಯ ಭೂಮಿಯಲ್ಲಿದ್ದರೆ, ಮತ್ತೊಂದು ಖಾಸಗಿ ಆಸ್ತಿಯಾಗಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಂದೇ ಹೆಲಿಪ್ಯಾಡ್ ಗೆ ಜಾಗ ಗುರುತಿಸುವ ಕೆಲಸವೂ ಪ್ರಾರಂಭವಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ಹೆಲಿಪ್ಯಾಡ್ ನ್ನು ಸಿಎಂ ಮಾತ್ರವಲ್ಲದೇ ವಿಐಪಿ ಗಳೂ ಬಳಕೆ ಮಾಡಬಹುದಾಗಿದೆ. ಆರೋಗ್ಯ ಸಮಸ್ಯೆಗೆ ತುರ್ತು ಚಿಕಿತ್ಸೆ ಅಗತ್ಯವಿರುವವರನ್ನೂ ಈ ಹೆಲಿಪ್ಯಾಡ್ ನಿಂದ ಏರ್ ಲಿಫ್ಟ್ ಮಾಡಬಹುದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT