ರಾಜ್ಯ

ಸಿಸಿಬಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ 4.5 ಕೋಟಿ ರೂ. ಮೌಲ್ಯದ ರಕ್ತಚಂದನ ವಶಕ್ಕೆ, ಇಬ್ಬರ ಬಂಧನ

Srinivasamurthy VN

ಬೆಂಗಳೂರು: ಬೆಂಗಳೂರು ಕೇಂದ್ರೀಯ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಬರೊಬ್ಬರಿ 4.5 ಕೋಟಿ ರೂ ಮೌಲ್ಯದ ರಕ್ತಚಂದನ ವಶಕ್ಕೆ ಪಡೆದಿದ್ದಾರೆ. 

ಬೆಂಗಳೂರು ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳನ್ನೂ ಕೂಡ ವಶಕ್ಕೆ ಪಡೆದಿದ್ದಾರೆ. ಒಟ್ಟು 4.5 ಕೋಟಿ ರೂ ಮೌಲ್ಯದ 9 ಟನ್ ರಕ್ತಚಂದನ ಮರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

SCROLL FOR NEXT