ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಜುನಾಥ್ ಪ್ರಸಾದ್ 
ರಾಜ್ಯ

ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸರ್ಕಾರ ವರ್ಗಾವಣೆ ಮಾಡಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸರ್ಕಾರ ವರ್ಗಾವಣೆ ಮಾಡಿದೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಇ.ವಿ. ರಮಣ ರೆಡ್ಡಿ ಅವರನ್ನು ಕೈಗಾರಿಕೆ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ ಕುಮಾರ್ ಕತ್ರಿ ಅವರನ್ನು ಕೃಷಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಜಾವೇದ್ ಅಖ್ತರ್ ಅವರನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದ್ದು, ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ. ತುಷಾರ್ ಗಿರಿನಾಥ್ ಅವರನ್ನು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದ್ದು, ಜೊತೆಗೆ ವಿಪತ್ತು ನಿರ್ವಹಣೆ , ಭೂಮಿಯ ಹೆಚ್ಚುವರಿ ಹೊಣೆಯನ್ನು ವಹಿಸಿ ಸರ್ಕಾರ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video