ಚಿತ್ರಕಲಾ ಪರಿಷತ್‌ 
ರಾಜ್ಯ

ಚಿತ್ರಕಲಾ ಪರಿಷತ್ತಿನಲ್ಲಿ 'ಬೆಂಗಳೂರು ಉತ್ಸವ'ಕ್ಕೆ ಚಾಲನೆ

ಕೊರೋನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಕರಕುಶಲಕರ್ಮಿಗಳಿಗೆ ಸೂಕ್ತ ವೇದಿಕೆ, ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ರಾಜ್ಯ ಚಿತ್ರಕಲಾ ಪರಿಷತ್‌ ಆವರಣದಲ್ಲಿ...

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಕರಕುಶಲಕರ್ಮಿಗಳಿಗೆ ಸೂಕ್ತ ವೇದಿಕೆ, ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ರಾಜ್ಯ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಆಯೋಜಿಸಲಾಗಿದ್ದ 10 ದಿನಗಳ ಬೆಂಗಳೂರು ಉತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ನಟಿ ಭೂಮಿ ಶೆಟ್ಟಿ ಅವರು, ಕೊರೋನಾ ಕಾಲದಲ್ಲಿ ಎಲ್ಲರೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಜನರು ಈ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಗಸ್ಟ್‌ 15 ರ ವರೆಗೆ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ.

ಕೋವಿಡ್‌ -19 ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT