ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆಟೋ ಪಲ್ಟಿಯಾಗಿ ಮೂವರ ದುರ್ಮರಣ

ವೇಗವಾಗಿ ಚಲಿಸುತ್ತಿದ್ದ ಆಟೋ ಪಲ್ಟಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಆಟೋ ಪಲ್ಟಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು-ಬೂದಿಗೆರೆ ರಸ್ತೆಯ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ.

ಕಿರಣ್, ಅನ್ವರ್ ಹುಸೇನ್, ಮತ್ತು ರಾಹುಲ್ ಮೃತ ದುರ್ದೈವಿಗಳು, ಕಿರಣ್ ಆಟೋ ಚಾಲಕನಾಗಿದ್ದು ಇನ್ನಿಬ್ಬರು ಪ್ರಯಾಣಿಕರಾಗಿದ್ದಾರೆ.  ಅತಿ ವೇಗವಾಗಿ ಆಟೋ ಚಲಾಯಿಸುತ್ತಿದ್ದ ಕಿರಣ್ ತಪ್ಪಿನಿಂದ ಆಟೋ ಪಲ್ಟಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎದುರಿನಿಂದ ಬಂದ ಕಾರು ಆಟೋಗೆ ಡಿಕ್ಕ ಹೊಡೆದಿದೆ, ಈ ವೇಳೆ ಚಾಲಕ ಕಿರಣ್ ಮತ್ತು ಪ್ರಯಾಣಿಕರಾಗ ಹುಸೇನ್ ಮತ್ತು ರಾಹುಲ್ ಸಾವನ್ನಪ್ಪಿದ್ದು ಮತ್ತೊಬ್ಬ ಪ್ರಯಾಣಿಕ ವಾಸಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕಾರು ಚಾಲಕ ಸ್ಥಳದಲ್ಲೇ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ, ಆರೋಪಿಗಾಗಿ ಶೋಧ ನಡೆಸುತ್ತಿರುವುದಾಗಿ ತಿಳಿಸಿರುವು ಚಿಕ್ಕಜಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!