ಸಾಂದರ್ಭಿಕ ಚಿತ್ರ 
ರಾಜ್ಯ

ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಜಾರಿಗೆ ಸರ್ಕಾರದ ಆದೇಶ 

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ ರೈತರ ಮಕ್ಕಳಿಗೆ ಒಂದು ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದ್ದರು.

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ ರೈತರ ಮಕ್ಕಳಿಗೆ ಒಂದು ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಬಗ್ಗೆ ಅಧಿಕೃತ ಆದೇಶ ಹೊರಿಡಿಸಿದೆ.

ಪಿಯುಸಿ, ಐಟಿಐ ಅಥವಾ ತತ್ಸಮಾನ ತರಗತಿಗಳಲ್ಲಿ ಓದುತ್ತಿರುವ ಬಾಲಕರಿಗೆ 2,500 ಮತ್ತು ಬಾಲಕಿಯರಿಗೆ ತಲಾ  3,000 ರು. ಶಿಷ್ಯವೇತನ ದೊರಕಲಿದೆ. ಪದವಿ, ಎಂಬಿಬಿಎಸ್‌, ಎಂಜಿನಿಯರಿಂಗ್‌ ಪದವಿ ಹಾಗೂ ಪದವಿಗೆ ಸಮನಾದ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ತಲಾ 5,000 ಮತ್ತು ವಿದ್ಯಾರ್ಥಿನಿಯರಿಗೆ ತಲಾ 5,500 ರು. ಶಿಷ್ಯವೇತನ ಪ್ರಕಟಿಸಲಾಗಿದೆ.

ಕಾನೂನು ಪದವಿ, ಅರೆ ವೈದ್ಯಕೀಯ, ಬಿ. ಫಾರ್ಮಾ, ನರ್ಸಿಂಗ್‌ ಮತ್ತು ಇತರ ವೃತ್ತಿಪರ ಕೋರ್ಸ್‌ ಗಳ ವಿದ್ಯಾರ್ಥಿಗಳಿಗೆ  7,500 ಮತ್ತು ವಿದ್ಯಾರ್ಥಿನಿಯರಿಗೆ  8,000 ಶಿಷ್ಯವೇತನ ನೀಡಲಾಗುತ್ತದೆ. ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಎಲ್ಲ ಸ್ನಾತಕೋತ್ತರ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ  10,000, ವಿದ್ಯಾರ್ಥಿನಿಯರಿಗೆ  11,000 ಶಿಷ್ಯವೇತನ ಘೋಷಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರು ಸಾಗುವಳಿ ಮಾಡುತ್ತಿರುವ ಕೃಷಿ ಜಮೀನು ಹೊಂದಿರಬೇಕು.

ಪೋಷಕರು ಇಲ್ಲವಾದಲ್ಲಿ, ವಿದ್ಯಾರ್ಥಿಗಳ ಹೆಸರಿನಲ್ಲಿ ಕೃಷಿ ಜಮೀನು ಇರಬೇಕು. ಈ ಯೋಜನೆಯಡಿ ಒಬ್ಬ ವಿದ್ಯಾರ್ಥಿ ಒಮ್ಮೆ ಮಾತ್ರ ಶಿಷ್ಯವೇತನ ಪಡೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯ ಸರ್ಕಾರದ ಅನುದಾನದಲ್ಲಿ ನೀಡುವ ಇತರೆ ಸಾಮಾನ್ಯ ಶಿಷ್ಯವೇತನಗಳನ್ನು ಯೋಜನೆಯ ಫಲಾನುಭವಿಗಳು ಆ ಅವಧಿಯಲ್ಲಿ ಪಡೆಯುವಂತಿಲ್ಲ. ಮೆರಿಟ್‌, ಅರ್ಹತಾ ಪರೀಕ್ಷೆ, ರ‍್ಯಾಂಕ್‌ ಆಧಾರದಲ್ಲಿ ನೀಡುವ ಶಿಷ್ಯವೇತನ ಅಥವಾ ಪ್ರಶಸ್ತಿಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ.

ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ.  ಈ ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಷ್ಟರ್, ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರುತ್ತದೆ. 

ಕೋರ್ಸ್ ನ ಸೆಮಿಸ್ಟರ್ ನಲ್ಲಿ, ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ, ಪುನಹ ಆ ಸೆಮಿಸ್ಟರ್, ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆಯಾದರೇ, ( ಪುನಹ ಪರೀಕ್ಷೆ ತೆಗೆದುಕೊಂಡರೇ ) ವಿದ್ಯಾರ್ಥಿಗಳು ಶಿಕ್ಷವೇತನವನ್ನು ಪಡೆಯಲು ಅರ್ಹರಾಗಿರುವುದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!