ಎನ್ಐಎ ಕೇಂದ್ರ ಕಚೇರಿ, ನವದೆಹಲಿ 
ರಾಜ್ಯ

ಬಾಂಗ್ಲಾದೇಶಿಗಳ ಮಾನವ ಕಳ್ಳಸಾಗಣೆ ಪ್ರಕರಣ: ಕರ್ನಾಟಕದಲ್ಲಿ ಎನ್ಐಎ ಶೋಧಕಾರ್ಯಾಚರಣೆ

ಮಾನವಕಳ್ಳಸಾಗಣೆಯಲ್ಲಿ ತೊಡಗಿದ್ದ ಬಾಂಗ್ಲಾದೇಶಿಗಳಿಗೆ ಹಾಗೂ ದಂಧೆಯ ಸಂತ್ರಸ್ತರಿಗೆ ನಕಲಿ ಗುರುತಿನ ಚೀಟಿ ದಾಖಲೆ ಸೃಷ್ಟಿಸುತ್ತಿದ್ದ ಪ್ರಕರಣದಲ್ಲಿ ಎನ್ಎಇಐ ಶೋಧಕಾರ್ಯಾಚರಣೆ ನಡೆಸಿದೆ. 

ನವದೆಹಲಿ: ಮಾನವಕಳ್ಳಸಾಗಣೆಯಲ್ಲಿ ತೊಡಗಿದ್ದ ಬಾಂಗ್ಲಾದೇಶಿಗಳಿಗೆ ಹಾಗೂ ದಂಧೆಯ ಸಂತ್ರಸ್ತರಿಗೆ ನಕಲಿ ಗುರುತಿನ ಚೀಟಿ ದಾಖಲೆ ಸೃಷ್ಟಿಸುತ್ತಿದ್ದ ಪ್ರಕರಣದಲ್ಲಿ ಎನ್ಎಇಐ ಶೋಧಕಾರ್ಯಾಚರಣೆ ನಡೆಸಿದೆ. 

ಬೆಂಗಳೂರಿನ ರಾಮಮೂರ್ತಿ ನಗರದ ಎರಡು ಪ್ರದೇಶದಲ್ಲಿ ಎನ್ಐಎ ಶೋಧಕಾರ್ಯಾಚರಣೆ ನಡೆದಿದೆ. 

ರಾಮಮೂರ್ತಿ ನಗರದಲ್ಲಿನ ಬಾಡಿಗೆ ಮನೆಯಲ್ಲಿದ್ದ ಬಾಂಗ್ಲಾದೇಶದ 7 ಮಹಿಳೆಯರು ಹಾಗೂ ಒಂದು ಮಗುವನ್ನು ಮಾನವ ಕಳ್ಳಸಾಗಣೆ ಜಾಲದಿಂದ ಜೂನ್ ನಲ್ಲಿ ರಕ್ಷಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಜಾಲದ ಮೇಲೆ ಎನ್ಐಎ ದಾಳಿ ನಡೆದಿದೆ. 

ನೌಕರಿ ಕೊಡಿಸುವ ಆಮಿಷವೊಡ್ಡಿ ಮಹಿಳೆಯರನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬಳಿಕ ಆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಿಗರ ಕಾಯ್ದೆ, ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಎನ್ಐಎ ಪ್ರಕರಣವನ್ನು ಮರುದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದೆ. ಶೋಧಕಾರ್ಯಾಚರಣೆಯಲ್ಲಿ ದಾಖಲೆಗಳು, 6 ಡಿಜಿಟಲ್ ಡಿವೈಸ್ ಗಳು, ಹಾರ್ಡ್ ಡಿಸ್ಕ್ ಗಳು, ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್