ರಾಜ್ಯ

ನಾಳೆ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಘೋಷಣೆ, ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ..!

Srinivasamurthy VN

ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಹೊಸದಾಗಿ ನೇಮಕಗೊಂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ನಾಳೆ ಅಂದರೆ ಸೋಮವಾರ ಮಧ್ಯಾಹ್ನ 3: 30 ಕ್ಕೆ SSLC ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಿದ್ದಾರೆ ಎಂದು ಕರ್ನಾಟಕ ಮಾಧ್ಯಮಿಕ ಶಾಲಾ ಪರೀಕ್ಷಾ ಮಂಡಳಿಯ (KSEEB) ನಿರ್ದೇಶಕಿ ಸುಮಂಗಲಾ ವಿ ಅವರು ಹೇಳಿದ್ದಾರೆ.

ಫಲಿತಾಂಶವನ್ನು ಅಧಿಕೃತ KSEEB ವೆಬ್‌ಸೈಟ್ sslc.karnataka.gov.in ನಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ವಿದ್ಯಾರ್ಥಿಗಳು ಒಟ್ಟು ಶೇ. 35 ಅಥವಾ 600 ರಲ್ಲಿ 210 ಅಂಕಗಳನ್ನು ಪಡೆಯಬೇಕು. ಪಾಸ್ ಸರ್ಟಿಫಿಕೇಟ್ ಪಡೆಯಲು, ಅವರು ಭಾಷಾ ಪರೀಕ್ಷೆಯಲ್ಲಿ ಕನಿಷ್ಠ 70 ಅಂಕಗಳನ್ನು ಪಡೆಯಬೇಕು ಎಂದು ತಿಳಿದುಬಂದಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನಲೆಯಲ್ಲಿ ಇತರೆ ರಾಜ್ಯಗಳಂತೆ, ಕರ್ನಾಟಕವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಲಿಲ್ಲ. ಬದಲಿಗೆ ಆಫ್‌ಲೈನ್ ಮೋಡ್‌ನಲ್ಲಿ ನಡೆಸಿತು. ಹೊಸ ರೂಪದಲ್ಲಿ ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್  ನೇತೃತ್ವದಲ್ಲಿ ಪರೀಕ್ಷೆ ನಡೆಯಿತು. ಗಣಿತ, ವಿಜ್ಞಾನ, ಮತ್ತು ಸಮಾಜ ವಿಜ್ಞಾನ ಮತ್ತು ಭಾಷಾ ಪತ್ರಿಕೆಗಳು ಸೇರಿದಂತೆ ಪ್ರಮುಖ ವಿಷಯಗಳಿಗೆ ಎರಡು ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಯಿತು. 

ಇದೀಗ ಈ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ
1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ
2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ
3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ
4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ
5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ
6. ತಾತ್ಕಾಲಿಕ ಅಂಕಪಟ್ಟಿ ಆನ್​ಲೈನ್​ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್​ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ?
ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.
 

SCROLL FOR NEXT