ರಾಜ್ಯ

ಕೋವಿಡ್ ಮೂರನೇ ಅಲೆ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್

Srinivasamurthy VN

ಬೆಂಗಳೂರು: ಕೋವಿಡ್ 3ನೇ ಅಲೆ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ  ಬಳಿಕ ಶಿಕ್ಷಣ ಖಾತೆ ವಹಿಸಿಕೊಂಡಿರುವ ಬಿಸಿ ನಾಗೇಶ್, ತಮ್ಮ ಮುಂದಿನ ಸಾವಲುಗಳ ಕುರಿತು ಮಾತನಾಡಿದರು.

ಪ್ರಮುಖವಾಗಿ ಕೋವಿಡ್ ಮೂರನೇ ಅಲೆ ಕುರಿತು ಮಾತನಾಡಿದ ನಾಗೇಶ್ ಅವರು, ಕೋವಿಡ್ 3ನೇ ಅಲೆಯ ಭೀತಿ ಇದೆಯಾದರೂ, ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಯಾದಗಿರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಸಿ ನಾಗೇಶ್ ಅವರು, ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಅವರ ಕಾರ್ಯವನ್ನು ಶ್ಲಾಘಿಸಿದರು. ಕೋವಿಡ್ ಸಾಂಕ್ರಾಮಿಕದಂತಹ ಸಮಯದಲ್ಲಿಯೂ ಕಲಿಕೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗಾಗಿ ಅವರು ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದರು. ಸುರೇಶ್ ಕುಮಾರ್ ಅವರ ಶ್ರಮದಿಂದಾಗಿ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಕಲಿಕೆ ಮುಂದುವರೆದಿದೆ. ಅದನ್ನು ಮುಂದುವರಿಸಲಾಗುತ್ತದೆ ಎಂದು ಹೇಳಿದರು.

SCROLL FOR NEXT